ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಮೂಲಕ ನಗರ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಹಾಗೂ ಕೆಲವು ಪಂಚಾಯ್ತಿಗಳನ್ನು ಗ್ರೇಡ್ -2 ರಿಂದ ಗ್ರೇಡ್-1ಕ್ಕೆ ಮೇಲ್ದರ್ಜೆಗೇರಿಸಲಾಗಿದೆ. ಅಂತಹ ಪಂಚಾಯಿತಿಗಳಿಗೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತಿ ಇರುವ ಅಭ್ಯರ್ಥಿಗಳು https://sevasindhuservices.karnataka.gov.in / ರ ಮೂಲಕ ಮಾ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮವನ್ನು ಮಾ.8 ರ ಬೆಳಿಗ್ಗೆ 10.30 ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ಪಾಲ್ಗೊಳ್ಳುವರು. ರಾಷ್ಟçಕವಿ ಡಾ.ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಟಾನದ ಅಧ್ಯಕ್ಷರು ಹಾಗೂ ಕಮಲಾ ನೆಹರು ಮಹಿಳಾ ಕಾಲೇಜಿನ ನಿ.ಉಪನ್ಯಾಸಕರಾದ ಪ್ರೊ.ಕಿರಣ್ ಆರ್ ದೇಸಾಯಿ ವಿಶೇಷ ಉಪನ್ಯಾಸ ನೀಡುವರು.

