HomeUncategorizedBIG NEWS: ಅಧಿಕಾರ ಹಂಚಿಕೆ ವಿಚಾರ: ಅಚ್ಚರಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

BIG NEWS: ಅಧಿಕಾರ ಹಂಚಿಕೆ ವಿಚಾರ: ಅಚ್ಚರಿ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ಮತ್ತೆ ಅಧಿಕಾರ ಹಂಚಿಕೆ ಚರ್ಚೆ ಆರಂಭವಾಗಲಿದೆಯೇ? ಎಂಬ ಪ್ರಶ್ನೆ ಮೂಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಇದೀಗ ಅಂತಹ ಚರ್ಚೆಯನ್ನು ಹುಟ್ಟುಹಾಕಿದೆ.

ಬಜೆಟ್ ಮಂಡನೆ ಬಳಿಕ ಇಂದು ಮೈಸೂರಿನಲ್ಲಿರುವ ಸಿಎಂ ಸಿದ್ದರಾಮಯ್ಯ, ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ನಿನ್ನೆಯಷ್ಟೇ ದಾಖಲೆಯ 17ನೇ ಬಜೆಟ್ ಮಂಡಿಸಿರುವ ನೀವು ಇನ್ನೆರಡು ಬಜೆಟ್ ಅನ್ನೂ ಮಂಡಿಸಲಿದ್ದೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಅದು ಹೈಕಮಾಂಡ್‌ನ ಅನುಮತಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್ ಏನು ತೀರ್ಮಾನ ಮಾಡಿದರೂ ಅದಕ್ಕೆ ಬದ್ಧನಾಗಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕಮಾಂಡ್ ಬಿಟ್ಟುಬಿಡು ಎಂದರೆ ಬಿಡುತ್ತೀನಿ ಎಂದಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular