HomeIndiaBIG NEWS: ಪತ್ರಕರ್ತ ರಾಮ್ ಚಂದರ್ ಹತ್ಯೆ ಪ್ರಕರಣ; ಡೇರಾ ಸಚ್ಚಾ ಸೌದಾದ ರಾಮ್ ರಹೀಮ್...

BIG NEWS: ಪತ್ರಕರ್ತ ರಾಮ್ ಚಂದರ್ ಹತ್ಯೆ ಪ್ರಕರಣ; ಡೇರಾ ಸಚ್ಚಾ ಸೌದಾದ ರಾಮ್ ರಹೀಮ್ ಸಿಂಗ್ ಖುಲಾಸೆ

ಚಂಡೀಗಢ: ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಹೈಕೋರ್ಟ್ ಖುಲಾಸೆಗೊಳಿಸಿದೆ.

ಮುಖ್ಯನ್ಯಾಯಮೂರ್ತಿ ಶೀಲ್ ನಾಗು ಹಾಗೂ ನ್ಯಾಯಮೂರ್ತಿ ವಿಕ್ರಮ್ ಅಗರ್ವಾಲ್ ಅವರಿದ್ದ ಪೀಠ ಈ ತೀರ್ಪು ನೀಡಿದೆ. ತೀರ್ಪಿನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ರಾಮ್ ಚಂಡರ್ ಪುತ್ರ ಅನ್ಸುಲ್ ತಿಳಿಸಿದ್ದಾರೆ.

2002ರಲ್ಲಿ ಪತ್ರಕರ್ಯ ರಾಮ್ ಚಂದರ್ ಛತ್ರಪತಿ ಅವರ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ಸಿಂಗ್ ಹಾಗೂ ಇತರ ಮೂವರು ತಪ್ಪಿತಸ್ಥರು ಎಂದು ಸ್ಬಿಐ ಕೋರ್ಟ್ 2019 ರಲ್ಲಿ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಗುರ್ಮಿತ್ ರಾಮ್ ರಹೀಮ್ ಸಿಂಗ್ ಪಂಜಾಬ್ ಹಾಗೂ ಹರ್ಯಾಣ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಏಳುವರ್ಷಗಾ ಕಾಲ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ಇದೀಗ ಪ್ರಕರಣದಿಂದ ರಾಮ್ ರಹೀಮ್ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುರ್ಮಿತ್ ರಾಮ್ ರಹೀಮ್ ಸಿಂಗ್ ಹೇಗೆ ಮಹಿಳಾ ಭಕ್ತರನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಾರೆ ಎಂಬುದನ್ನು ರಾಮ್ ಚಂದರ್ ಛತ್ರಪತಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಅವರನ್ನು ಅವರ ಮನೆಯ ಮುಂದೆಯೇ ಗುಂಡಿಕ್ಕಿ ಕೊಲ್ಲಲಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular