ಮಂಗಳೂರು: ಮಾರ್ಚ್ 9ರಂದು ಬಜೆಟ್ ಕುರಿತಾಗಿ ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮಹತ್ವ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆ ವಿಚಾರ, ಅನುದಾನ ವರ್ಗೀಕರಣ, ಹಂಚಿಕೆ, ಬಳಕೆ ಕುರಿತಾಗಿ ಶಾಸಕರಿಗೆ ಕಾರ್ಯಾಗಾರ ಆಯೋಜಿಸಲಾಗಿದೆ. ಮಾರ್ಚ್ 9ರಂದು ಸಂಜೆ 4 ಗಂಟೆಗೆ ಲಲಿತ ಅಶೋಕ್ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಾಗಾರ ನಡೆಸಿಕೊಳ್ಳಲಿದ್ದಾರೆ. 17ನೇ ಬಾರಿಗೆ ಬಜೆಟ್ ಮಂಡಿಸಿ ಆರ್ಥಿಕ ವ್ಯವಸ್ಥೆ ನಿರ್ವಹಣೆ ಕುರಿತಾಗಿ ಹೆಚ್ಚಿನ ಜ್ಞಾನ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರೇ ಮಾಹಿತಿ ನೀಡಲಿದ್ದಾರೆ. ಶಾಸಕರು ಯಾವುದೇ ರೀತಿಯ ಗೊಂದಲ ಪರಿಹರಿಸಿಕೊಳ್ಳಬಹುದು. ಹಣಕಾಸಿನ ನಿರ್ವಹಣೆ, ಹಂಚಿಕೆ ಕುರಿತಂತೆ ಮಾಹಿತಿ ಒದಗಿಸುವ ಉದ್ದೇಶ ಹೊಂದಿರುವ ಈ ಇಂತಹ ಕಾರ್ಯಾಗಾರವನ್ನು ಇದೇ ಮೊದಲ ಬಾರಿಗೆ ನಡೆಸುತ್ತಿದ್ದು. ಎಲ್ಲಾ ಶಾಸಕರು ತಪ್ಪದೆ ಹಾಜರಾಗುವಂತೆ ತಿಳಿಸಲಾಗಿದೆ ಎಂದರು.

