ಮೈಸೂರು: ಮಕ್ಕಳಿಗೆ ಮೊಬೈಲ್ ನಿಷೇಧ ಸರಿಯಲ್ಲ, ಸರ್ಕಾರದ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಮನೆಯಲ್ಲಿ ಮಕ್ಕಳು ಅಪ್ಪ, ಅಮ್ಮನ ಮೊಬೈಲ್ ತೆಗೆದುಕೊಂಡು ನೋಡುತ್ತಾರೆ. ಅವರನ್ನು ಏನು ಮಾಡಲು ಆಗುತ್ತದೆ? ಜೈಲಿಗೆ ಹಾಕುವುದಕ್ಕೆ ಆಗುತ್ತಾ? ಕೊರೋನಾ ಸಂದರ್ಭದಲ್ಲಿ ಆನ್ಲೈನ್ ಕ್ಲಾಸ್ ಗೆ ಮೊಬೈಲ್ ಬಳಕೆ ಮಾಡುತ್ತಿದ್ದರು. ಜಗತ್ತಿನ ಮಾಹಿತಿ ತಿಳಿಯಲು ವಿದ್ಯಾರ್ಥಿಗಳಿಗೆ ಮೊಬೈಲ್ ನಿಂದ ಅನುಕೂಲವಾಗಿದೆ ಎಂದು ಹೇಳಿದ್ದಾರೆ.
ಮೊಬೈಲ್ ಬ್ಯಾನ್ ಮಾಡುವುದು ಅಥವಾ ಸಾಮಾಜಿಕ ಜಾಲತಾಣ ನಿಷೇಧ ಸರಿಯಲ್ಲ, ಸರ್ಕಾರ ಈ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ. ಸಿದ್ದರಾಮಯ್ಯರನ್ನು ಬಿಟ್ಟರೆ ಉತ್ತಮ ವ್ಯಕ್ತಿ ಯಾರಿದ್ದಾರೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

