HomeKarnatakaಕ್ರಿಕೆಟ್‌ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ: ಟಿ20 ವಿಶ್ವಕಪ್ ಗೆದ್ದ ಭಾರತ,...

ಕ್ರಿಕೆಟ್‌ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ: ಟಿ20 ವಿಶ್ವಕಪ್ ಗೆದ್ದ ಭಾರತ, ರನ್ನರ್ ಅಪ್ ನ್ಯೂಜಿಲೆಂಡ್ ತಂಡಕ್ಕೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತ ಮತ್ತು ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ,

ವಿಶ್ವ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ಟಿ20 ವಿಶ್ವಕಪ್ ಪಂದ್ಯಾವಳಿಯ ಮೊದಲ ದಿನದಿಂದಲೇ ಚಾಂಪಿಯನ್ ಆಟವಾಡುತ್ತಾ ಬಂದಿದ್ದ ನಮ್ಮ ತಂಡ ಪ್ರಶಸ್ತಿಗೆ ಅತ್ಯಂತ ಅರ್ಹ ತಂಡವಾಗಿತ್ತು. ಯುವ ಆಟಗಾರರಿಂದಲೇ ತುಂಬಿದ್ದ ಈ ತಂಡ ಅನುಭವದಲ್ಲಿ ಕಡಿಮೆಯಿದ್ದರೂ, ಪ್ರತಿಭಾಶಾಲಿಗಳಿಂದ ಕೂಡಿತ್ತು. ತವರು ಪ್ರೇಕ್ಷಕರ ಬೆಂಬಲ, ಆಟಗಾರರ ಶ್ರಮ ಮತ್ತು ಕೋಟ್ಯಂತರ ಭಾರತೀಯರ ಹಾರೈಕೆ ವಿಶ್ವಕಪ್ ಕಿರೀಟವಾಗಿ ನಮ್ಮವರ ಮುಡಿ ಸೇರಿದೆ.

ಇಂದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್, ಅದ್ಭುತ ಬೌಲಿಂಗ್, ಅತ್ಯುತ್ತಮ ಕ್ಷೇತ್ರರಕ್ಷಣೆ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ಭಾರತ ತಂಡ ಶ್ರೇಷ್ಠ ಪ್ರದರ್ಶನ ತೋರಿದೆ. ಉತ್ತಮ ಪ್ರದರ್ಶನ ನೀಡುತ್ತಾ ಫೈನಲ್ ಪಂದ್ಯದ ವರೆಗೆ ಬಂದಿರುವ ನ್ಯೂಜಿಲೆಂಡ್ ತಂಡದ ಸಾಧನೆ ಕೂಡ ಕಡಿಮೆಯೇನಲ್ಲ. ಅವರಿಗೂ ನನ್ನ ಅಭಿನಂದನೆಗಳು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕ್ರಿಕೆಟ್‌ ಜಗತ್ತಿನಲ್ಲಿ ಭಾರತದ ಕೀರ್ತಿ ಪತಾಕೆ ಮತ್ತೆ ಮುಗಿಲೆತ್ತರದಲ್ಲಿ ರಾರಾಜಿಸುತ್ತಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೊಂದು ಅವಿಸ್ಮರಣೀಯ ದಿನ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular