ಬೆಂಗಳೂರು: ಇಸ್ರೇಲ್-ಅಮೆರಿಕಾ- ಇರಾನ್ ಯುದ್ಧಗಳಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಯುದ್ಧದ ತೀವ್ರತೆ ಹೆಚ್ಚುತ್ತಿರುವ ಬೆನ್ನಲ್ಲೇ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ.
ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದ್ದಾರೆ.
ವಿಮಾನ ಸಂಚಾರ ತಾತ್ಕಾಲಿಕವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಕನ್ನಡಿಗರು ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ 2 ಸಾವಿರಕ್ಕೂ ಹೆಚ್ಚು ಮಂದಿ ಸುರಕ್ಷಿತವಾಗಿ ಭಾರತಕ್ಕೆ, ವಿಶೇಷವಾಗಿ ಬೆಂಗಳೂರಿಗೆ ಬಂದಿರುವ ಮಾಹಿತಿ ಲಭ್ಯವಾಗಿದೆ.
ದುಬೈನಲ್ಲಿ ದೊಡ್ಡ ಮಟ್ಟದ ತೊಂದರೆ ಎದುರಾಗಿಲ್ಲ ಎಂದು ಹೇಳುತ್ತಿದ್ದರೂ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಯಾವಾಗ ಹೇಗೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತದೆ ಎನ್ನುವುದು ತಿಳಿಯದ ಹಿನ್ನೆಲೆಯಲ್ಲಿ ನಾಅಗರ್ಕರು ಮುಂಜಾಗೃತಾ ಕ್ರಮವಾಗಿ ತಮ್ಮ ತಾಯ್ನಾಅಡಿಗೆ ಮರಳುತ್ತಿದ್ದಾರೆ.

