HomeKarnatakaರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್: 7 ವಿಶೇಷ ತಂಡಗಳಿಂದ ಆರೋಪಿಗಳು ಅರೆಸ್ಟ್: ಮುಂದುವರೆದ ಶೋಧಕಾರ್ಯಾಚರಣೆ

ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್: 7 ವಿಶೇಷ ತಂಡಗಳಿಂದ ಆರೋಪಿಗಳು ಅರೆಸ್ಟ್: ಮುಂದುವರೆದ ಶೋಧಕಾರ್ಯಾಚರಣೆ

ಬೆಂಗಳೂರು: ರಿಯಲ್ ಎಸ್ಟೇಟ್ ಏಜೆಂಟ್ ಓರ್ವರನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕರ್ಪೂರು ಗೇಟ್ ಬಳಿ ನಡೆದಿದೆ.

ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಕಿಡ್ನ್ಯಾಪ್ ಆದವರು. ಪ್ರಕರಣ ಸಂಬಂಧ ಪೊಲೀಸರು 7 ವಿಶೇಷ ತಂಡಗಳನ್ನು ರಚಿಸಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಅಲಿಯಾಸ್ ಗೋಪಿ ಎಂಬ ರಿಯಲ್ ಎಸ್ಟೇಟ್ ಏಜೆಂಟ್ ಅವರನ್ನು ಮಾರ್ಚ್ 8ರಂದು ಸಂಜೆ 7.30ರ ಸುಮಾರಿಗೆ ಕಿಡ್ನ್ಯಾಪ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ವಾಹನದಿಂದ ಡಿಕ್ಕಿ ಹೊಡೆದ ಕಿಡಿಗೇಡಿಗಳು ಸ್ಪ್ರೇ ಹಾಕಿ ದಾಳಿ ನಡೆಸಿ ಅವರನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸದ್ದಾರೆ.

ಪ್ರಕರಣ ಸಂಬಂಧ ಜಿಗಣಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬುವರನ್ನು ಗೋಪಾಲ್ ಪತ್ನಿಯ ಆರೋಪದ ಮೇರೆಗೆ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಅಪಹರಣಗೊಂಡ ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ 9 ಇನ್ಸ್‌ಪೆಕ್ಟರ್‌ಗಳ ಸಹಭಾಗಿತ್ವದಲ್ಲಿ 7 ವಿಶೇಷ ತಂಡಗಳನ್ನು ರಚಿಸಲಾಗಿದೆ. ತಂಡಗಳು ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ.

ಘಟನೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಚಂದ್ರಕಾಂತ್ ಅವರು ಆನೇಕಲ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬೆಂಗಳೂರು ಗ್ರಾಮಾಂತರ ಹೆಚ್ಚುವರಿ ಎಸ್‌ಪಿ ವೆಂಕಟೇಶ್ ಪ್ರಸನ್ನ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular