HomeKarnatakaBREAKING : ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ : ಬೆಂಗಳೂರಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ.!

BREAKING : ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ : ಬೆಂಗಳೂರಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು :  ಬೆಂಗಳೂರಿನ ಹೆಬ್ಬಾಳದಲ್ಲಿ ಒಂದು ಘೋರ ಘಟನೆ ನಡೆದಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ದೊಡ್ಡ ಮಟ್ಟದ ನಷ್ಟ ಅನುಭವಿಸಿದ್ದ 50 ವರ್ಷದ ವ್ಯಕ್ತಿಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ವೆಂಕಟೇಶ್ (50) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಹೆಬ್ಬಾಳ ರೈಲ್ವೆ ಹಳಿಗಳ ಸಮೀಪ ಈ ಘಟನೆ ನಡೆದಿದೆ.ವೆಂಕಟೇಶ್ ಅವರು ಷೇರು ಮಾರುಕಟ್ಟೆಯಲ್ಲಿ (Stock Market) ಹೆಚ್ಚಿನ ಹಣ ಹೂಡಿಕೆ ಮಾಡಿ ನಷ್ಟ ಅನುಭವಿಸಿದ್ದರು ಎನ್ನಲಾಗಿದೆ. ಇದರಿಂದಾಗಿ ಸಾಲಗಾರರ ಕಾಟ ಹೆಚ್ಚಾಗಿದ್ದು, ಮನನೊಂದಿದ್ದರು. ಅಲ್ಲದೆ, ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಲೂ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಅಥವಾ ನಿಮ್ಮ ಆಪ್ತರಿಗೆ ಮಾನಸಿಕ ನೆರವಿನ ಅಗತ್ಯವಿದ್ದರೆ ದಯವಿಟ್ಟು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ (ಉದಾಹರಣೆಗೆ: ಕರ್ನಾಟಕ ಸಹಾಯವಾಣಿ ‘ಆಪ್ತಮಿತ್ರ’ – 104 ಅಥವಾ ನಿಮ್ಹಾನ್ಸ್ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿ – 080-46110007).

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular