ಗೋಪಾಲ್ಗಂಜ್ : ಮಹಿಳೆಯೊಬ್ಬರು ತನ್ನ ಪ್ರಿಯಕರನ ಬಿಡುಗಡೆಗೆ ಒತ್ತಾಯಿಸಿ ಮೊಬೈಲ್ ಟವರ್ ಏರಿ ಕುಳಿತಿರುವ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ತಾನು ಪ್ರೀತಿಸ್ದ ಯುವಕನನ್ನು ಪೊಲೀಸರು ಬಂಧಿಸಿದ್ದು, ಆತನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಯುವತಿ ಮೊಬೈಲ್ ಟವರ್ ಹತ್ತಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಂಧಿತ ಪ್ರಿಯಕರನನ್ನು ಸ್ಥಳಕ್ಕೆ ಕರೆತಂದ ನಂತರ ಯುವತಿ ಮೊಬೈಲ್ ಟವರ್ ನಿಂದ ಕೆಳಗಿಳಿದಿದ್ದಾಳೆ.
ಗೋಪಾಲ್ಗಂಜ್ ಜಿಲ್ಲೆಯ ಬಂಕಟ ಜಾಗಿರ್ದಾರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.
ಮಹಿಳೆ ಮತ್ತು ಆಕೆಯ ಪ್ರಿಯಕರ ಪವನ್ ಚೌಹಾಣ್ ಇಬ್ಬರೂ ಗೋಪಾಲ್ಗಂಜ್ ಜಿಲ್ಲೆಯ ಬಂಕತಾ ಮಾಲ್ ಗ್ರಾಮದ ನಿವಾಸಿಗಳು. ಮಹಿಳೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಡಿದರೂ ಆಕೆಯ ಸುಳಿವಿರಲಿಲ್ಲ. ಗಾಬರಿಯಾದ ಕುಟುಂಬದವರು ಪೊಲೀಸ್ ಠಾಣೆಗೆ ತೆರಳು ದೂರು ದಾಖಲಿಸಿದ್ದರು.
ಮಹಿಳೆಯ ಕಿಡ್ನ್ಯಾಪ್ ಮಾಡಿರುವ ಶಂಕೆಯಲ್ಲಿ ಪೊಲೀಸರು ಪವನ್ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಪ್ರಿಯಕರನ ಬಂಧನದ ಬಗ್ಗೆ ಮಹಿಳೆಗೆ ತಿಳಿಯುತ್ತಿದ್ದಂತೆ ಟವರ್ ಏರಿ ಕುಳಿತು ರಾದ್ಧಾಂತ ಮಾಡಿದ್ದಾಳೆ.

