ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಬೆಂಗಳೂರು ನಗರದ ಉಪ್ಪಾರಪೇಟೆ ಲಾಡ್ಜ್ ವೊಂದರಲ್ಲಿ ಶಾಸಕ ಶಿವಗಂಗಾ ಅವರ ಪಿಎ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ಮೂಲದ ಶಿವಕುಮಾರ್ ಆತ್ಮಹತ್ಯೆಗೆ ಶರಣಾದವರು.
ಫೆ.17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಿವಕುಮಾರ್ ಶಾಸಕ ಬಸವರಾಜ್ ಶಿವಗಂಗಾ ಅವರ ಪಿಎ ಆಗಿ ಕೆಲಸ ಮಾಡುತ್ತಿದ್ದರು. ತೀವ್ರ ಸಾಲ ಮಾಡಿಕೊಂಡಿದರು. ಅವರನ್ನು ಕೆಲ ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಪತ್ನಿಗೆ ವಿಡಿಯೋ ಕಾಲ್ ಮಾಡಿದ್ದರಂತೆ. ಬಳಿಕ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

