HomeLatest Newsಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ: 6 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್:...

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ: 6 ತಿಂಗಳ ಹಿಂದಿನ ವಿಡಿಯೋ ಈಗ ವೈರಲ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸ್ಪಷ್ಟನೆ

ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ನೀಡಿದರು.

ಬೆಳಗಾವಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಲಾಗಿದೆ ಎಂಬುದು ಸುಳ್ಳು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬಜೆಟ್‌ ಅಧಿವೇಶನದ ಎರಡನೇ ದಿನವಾದ ಸೋಮವಾರ ನಡೆದ ವಿಧಾನ ಪರಿಷತ್‌ ಕಲಾಪದ ಶೂನ್ಯದ ವೇಳೆ ಕಾಂಗ್ರೆಸ್‌ ಸದಸ್ಯ ಎಂ.ನಾಗರಾಜ್‌ ಅವರು, ಬೆಳಗಾವಿ ಅಂಗನವಾಡಿ ಮಕ್ಕಳಿಗೆ ‘ಎಕ್ಸ್‌ಪೈರಿ’ ಮಿಲೆಟ್ ಲಡ್ಡು! ಎಂದು ಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾಗಿರುವ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ಜಿಲ್ಲಾ ಉಪ ನಿರ್ದೇಶಕರು, ಸಿಡಿಪಿಒಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆದಿದ್ದೇನೆ. ಅಂತಹ ಯಾವುದೇ ಲೋಪಗಳು ಕಂಡು ಬಂದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

6 ತಿಂಗಳ ಹಿಂದಿನ ವಿಡಿಯೋವನ್ನು ಬಿಡುಗಡೆ ಮಾಡಲಾಗಿತ್ತು. ಕಳಪೆ ಆಹಾರ ಪೂರೈಸಲಾಗುತ್ತಿದೆ ಎಂದು ಹೇಳಲಾಗಿತ್ತು. ಆದರೆ, ಅಂಗನವಾಡಿ ಕೆಂದ್ರಗಳಿಗೆ ಪೌಷ್ಠಿಕ ಆಹಾರ ಪೂರೈಕೆ ಸಂಬಂಧ ಯಾವುದೇ ಲೋಪ ಆಗಿಲ್ಲ. ತಪ್ಪು ಮಾಡಿದರೆ ಖಂಡಿತವಾಗಿಯೂ ಕ್ರಮ ಕೈಗೊಳ್ಳುತ್ತೇನೆ. ಸದ್ಯ ಯಾವುದೇ ತಪ್ಪು ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular