HomeLatest NewsBIG NEWS : ‘ಆ್ಯಸಿಡ್' ದಾಳಿ  ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಿ’  : ಎಲ್ಲಾ ರಾಜ್ಯಗಳಿಗೆ...

BIG NEWS : ‘ಆ್ಯಸಿಡ್’ ದಾಳಿ  ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಿ’  : ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಆದೇಶ.!

ಇತ್ತೀಚಿನ ದಿನಗಳಲ್ಲಿ ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಅಥವಾ ಕೌಟುಂಬಿಕ ಕಲಹಗಳ ಹಿನ್ನೆಲೆಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುತ್ತಿರುವ ಆಸಿಡ್ ದಾಳಿಗಳು ತೀವ್ರ ಆತಂಕಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ, ಹರಿಯಾಣದ ಸಂತ್ರಸ್ತೆ ಶಾಹೀನ್ ಮಲಿಕ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಹೌದು.   ದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಆ್ಯಸಿಡ್ ದಾಳಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ಸಂತ್ರಸ್ತರಿಗೆ ಹೊಸ ಬದುಕಿನ ಭರವಸೆ ನೀಡುವ ನಿಟ್ಟಿನಲ್ಲಿ ಐತಿಹಾಸಿಕ ಆದೇಶವೊಂದನ್ನು ಹೊರಡಿಸಿದೆ. ಇಂತಹ ಘೋರ ಕೃತ್ಯಕ್ಕೆ ಬಲಿಯಾದ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ಅಥವಾ ಜೀವನೋಪಾಯಕ್ಕಾಗಿ ವಿಶೇಷ ಆರ್ಥಿಕ ಭತ್ಯೆಗಳನ್ನು ಒದಗಿಸಲು ಅಗತ್ಯವಿರುವ ಹೊಸ ನೀತಿಗಳನ್ನು ರೂಪಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸರ್ವೋಚ್ಚ ನ್ಯಾಯಾಲಯ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಸರ್ಕಾರಿ ಉದ್ಯೋಗ ಮತ್ತು ಆರ್ಥಿಕ ನೆರವು : ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ಸರ್ಕಾರಿ ಉದ್ಯೋಗ ಅಥವಾ ಜೀವನೋಪಾಯಕ್ಕಾಗಿ ವಿಶೇಷ ಆರ್ಥಿಕ ಭತ್ಯೆಗಳನ್ನು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಹೊಸ ನೀತಿಗಳನ್ನು ರೂಪಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಿ ಮುಟ್ಟುಗೋಲು: ಇಂತಹ ಘೋರ ಕೃತ್ಯ ಎಸಗಿದ ಅಪರಾಧಿಗಳ ಮನೆ ಮತ್ತು ಆಸ್ತಿಗಳನ್ನು ವಶಪಡಿಸಿಕೊಂಡು, ಆ ಹಣವನ್ನು ಸಂತ್ರಸ್ತರ ಪುನರ್ವಸತಿ ಮತ್ತು ಚಿಕಿತ್ಸೆಗೆ ಬಳಸಿಕೊಳ್ಳುವ ಬಗ್ಗೆ ನ್ಯಾಯಾಲಯ ಪ್ರಸ್ತಾಪಿಸಿದೆ.

ವಿಶೇಷ ಕಾನೂನುಗಳ ಅಗತ್ಯ: ಆಸಿಡ್ ದಾಳಿ ಸಂತ್ರಸ್ತರ ರಕ್ಷಣೆ ಮತ್ತು ಕಲ್ಯಾಣಕ್ಕಾಗಿ ಪ್ರತ್ಯೇಕ ಕಾನೂನುಗಳನ್ನು ತರಲು ಸುಪ್ರೀಂ ಕೋರ್ಟ್ ಸೂಚಿಸಿದೆ.

ಸಮಾನ ನೀತಿಯ ಕೊರತೆ: ಪ್ರಸ್ತುತ ಹಲವು ರಾಜ್ಯಗಳಲ್ಲಿ ಸಂತ್ರಸ್ತರ ಕಲ್ಯಾಣಕ್ಕಾಗಿ ನಿರ್ದಿಷ್ಟ ಮತ್ತು ಪರಿಣಾಮಕಾರಿ ನೀತಿಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇನ್ನು ಮುಂದೆ ಎಲ್ಲಾ ಸರ್ಕಾರಗಳು ಈ ವಿಷಯದಲ್ಲಿ ಗಂಭೀರವಾಗಿ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ನಿರ್ದೇಶಿಸಿದೆ. ಸಿಜೆಐ ಜಸ್ಟಿಸ್ ಸೂರ್ಯಕಾಂತ್ ಮತ್ತು ಜಸ್ಟಿಸ್ ಜೋಯ್ ಮಲ್ಯಾ ಬಾಗ್ಚಿ ಅವರನ್ನೊಳಗೊಂಡ ಧರ್ಮಾಸನವು ಈ ಮಹತ್ವದ ತೀರ್ಪನ್ನು ನೀಡಿದೆ. ಸಂತ್ರಸ್ತರ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular