HomeKarnatakaSHOCKING: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಕಂಪ್ಯೂಟರ್ ಆಪರೇಟರ್ ಸಾವು

SHOCKING: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಕಂಪ್ಯೂಟರ್ ಆಪರೇಟರ್ ಸಾವು

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ನಡೆದಿದೆ.

ಮೋನಿಷಾ (25) ಮೃತ ಯುವತಿ. ಕಾಲು ಜಾರಿ ಆಕಸ್ಮಿಕವಾಗಿ ಕೃಷಿಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ಮೋನಿಷಾ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಅಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

ದಿಬ್ಬೂರು ಗ್ರಾಮದ ಮಂಜುಳಾ ಹಾಗೂ ಮುನಿರಾಜು ದಂಪತಿಯ ಪುತ್ರಿ ಮೋನಿಷಾ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular