HomeLatest NewsGOOD NEWS : ರಾಜ್ಯದಲ್ಲಿ ಶೀಘ್ರವೇ 15,000 ಶಿಕ್ಷಕರ ಹುದ್ದೆ ಭರ್ತಿ : ಸಚಿವ ಮಧು...

GOOD NEWS : ರಾಜ್ಯದಲ್ಲಿ ಶೀಘ್ರವೇ 15,000 ಶಿಕ್ಷಕರ ಹುದ್ದೆ ಭರ್ತಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬಜೆಟ್‌ನಲ್ಲಿ ಘೋಷಿಸಿರುವಂತೆ 15,000 ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸದನದಲ್ಲಿ ಭರವಸೆ ನೀಡಿದ್ದಾರೆ.

ಶಾಲೆಗಳಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರ ಕೊರತೆ ಹೆಚ್ಚಾಗಿರುವುದರಿಂದ, ಈ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಭರ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಸದ್ಯ ಖಾಲಿ ಇರುವ ಹಾಗೂ ಮುಂದಿನ ಆರು ತಿಂಗಳಲ್ಲಿ ನಿವೃತ್ತಿಯಿಂದ ಖಾಲಿಯಾಗಲಿರುವ ಪ್ರಾಂಶುಪಾಲರ ಹುದ್ದೆಗಳನ್ನು ಮುಂಬಡ್ತಿ (Promotion) ಮೂಲಕ ತುಂಬಲು ಇಲಾಖೆ ನಿರ್ಧರಿಸಿದೆ ಎಂದರು.

ಉಪನ್ಯಾಸಕರ ಜೇಷ್ಠತಾ ಪಟ್ಟಿ: ಕಾಲೇಜು ಶಿಕ್ಷಣ ಇಲಾಖೆಯ ಉಪನ್ಯಾಸಕರ ಕರಡು ಜೇಷ್ಠತಾ ಪಟ್ಟಿಗೆ ಬಂದಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು. ಆನಂತರ ಮುಂಬಡ್ತಿ ಪ್ರಕ್ರಿಯೆ ಚಾಲನೆ ಪಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಂಥಾಲಯ ಶುಚಿಗಾರರ ವೇತನ: ಗ್ರಂಥಾಲಯಗಳಲ್ಲಿ ಕೆಲಸ ಮಾಡುವ ಶುಚಿಗಾರರು ದಿನಕ್ಕೆ 8 ಗಂಟೆಗಿಂತ ಕಡಿಮೆ ಅವಧಿ ಕೆಲಸ ಮಾಡುತ್ತಿರುವುದರಿಂದ, ಅವರಿಗೆ ಕನಿಷ್ಠ ವೇತನ ನಿಯಮ ಅನ್ವಯಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular