HomeKarnatakaಮಾ. 15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

ಮಾ. 15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

ನೈರುತ್ಯ ರೈಲ್ವೆಯು ಕೆಳಕಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾರ್ಚ್ 15, 2026 ರಿಂದ ಜಾರಿಗೆ ಬರಲಿದೆ. ವಿವರಗಳು ಈ ಕೆಳಗಿನಂತಿವೆ:

1. ರೈಲು ಸಂಖ್ಯೆ 20669 ಎಸ್‌ಎಸ್‌ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್‌ಪ್ರೆಸ್: ಬೆಳಗಾವಿ (07:05/07:10 ಗಂಟೆ) ಮತ್ತು ಘಟಪ್ರಭಾ (07:48/07:50 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

2. ರೈಲು ಸಂಖ್ಯೆ 20661 ಕೆಎಸ್‌ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್: ದಾವಣಗೆರೆ (09:30/09:32 ), (10:20/10:22 ) (11:15/11:20 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

3. ರೈಲು ಸಂಖ್ಯೆ 20662 ಧಾರವಾಡ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಹಾವೇರಿ (14:48/14:50 ಗಂಟೆ) ಮತ್ತು ದಾವಣಗೆರೆ (15:33/15:35 ಗಂಟೆ) ನಿಲ್ದಾಣಗಳಲ್ಲಿ ಸಮಯ ಬದಲಾವಣೆಯಾಗಲಿದೆ. ತುಮಕೂರು ನಿಲ್ದಾಣದ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಹಾಗೂ ಯಶವಂತಪುರ ನಿಲ್ದಾಣಕ್ಕೆ 19:21/19:23 ಗಂಟೆಗೆ ತಲುಪಿ, ನಿರ್ಗಮಿಸಲಿದೆ.

4. ರೈಲು ಸಂಖ್ಯೆ 26751 ಬೆಳಗಾವಿ-ಕೆಎಸ್‌ಆರ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್: ಹಾವೇರಿ (08:42/08:44 ០), កំ (09:28/09:30 ), (12:15/12:17 ) ಯಶವಂತಪುರ (13:23/13:25 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

5. ರೈಲು ಸಂಖ್ಯೆ 20704 ಯಶವಂತಪುರ-ಕಾಚಿಗುಡ ವಂದೇ ಭಾರತ್ ಎಕ್ಸ್‌ಪ್ರೆಸ್: ಹಿಂದೂಪುರ ನಿಲ್ದಾಣದಲ್ಲಿ (15:55/15:57 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಅದೇ ರೀತಿ, ರೈಲು ಸಂಖ್ಯೆ 20703 ಕಾಚಿಗುಡ-ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಹಿಂದೂಪುರದಲ್ಲಿ (12:17/12:19 ಗಂಟೆ) ಪರಿಷ್ಕೃತ ವೇಳಾಪಟ್ಟಿಯನ್ನು ಹೊಂದಿರುತ್ತದೆ.

6. ರೈಲು ಸಂಖ್ಯೆ 22231 ಕಲಬುರಗಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (11:13/11:15 ಗಂಟೆ) ಮತ್ತು ಯಲಹಂಕ (12:58/13:00 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ. ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 22232 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ಯಲಹಂಕ (15:09/15:11 ಗಂಟೆ) ಮತ್ತು ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ (16:45/16:47 ಗಂಟೆ) ನಿಲ್ದಾಣಗಳಲ್ಲಿ ಪರಿಷ್ಕೃತ ವೇಳಾಪಟ್ಟಿಯಂತೆ ಸಂಚರಿಸಲಿದೆ.

7. ರೈಲು ಸಂಖ್ಯೆ 20642 ಕೊಯಮತ್ತೂರು-ಬೆಂಗಳೂರು ಕಂಟೋನ್ಮಂಟ್ ವಂದೇ ಭಾರತ್‌ ಎಕ್ಸ್‌ಪ್ರೆಸ್‌: ಹೊಸೂರು ನಿಲ್ದಾಣದಲ್ಲಿ (12:13/12:15 ಗಂಟೆ) ಪರಿಷ್ಕೃತ ಸಮಯವನ್ನು ಹೊಂದಿರುತ್ತದೆ.

ಪ್ರಯಾಣಿಕರು ಈ ಪರಿಷ್ಕೃತ ಸಮಯವನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸತಕ್ಕದ್ದು ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular