HomeKarnatakaದಾವಣಗೆರೆ ದಕ್ಷಿಣ ಉಪ ಚುನಾವಣೆ: ಸಚಿವರ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ಗರಂ!

ದಾವಣಗೆರೆ ದಕ್ಷಿಣ ಉಪ ಚುನಾವಣೆ: ಸಚಿವರ ವಿರುದ್ಧ ಕಾಂಗ್ರೆಸ್ ಎಂಎಲ್‌ಸಿ ಗರಂ!

ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಬಹಳ ಚರ್ಚೆಯ ವಿಚಾರವಾಗಿದೆ. ಅಭ್ಯರ್ಥಿ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ನಡುವೆಯೇ ಜಟಾಪಟಿ ನಡೆಯುತ್ತಿದೆ.

ದಾವಣಗೆರೆ ದಕ್ಷಿಣದ ಟಿಕೆಟ್ ವಿಚಾರದಲ್ಲಿ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆಕ್ರೋಶವನ್ನು ಹೊರಹಾಕಿದ್ದರು. ಇದಕ್ಕೆ ಎಂಎಲ್‌ಸಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಅವರು, ‘ಅಲ್ಪಸಂಖ್ಯಾತ ಸಮುದಾಯದಲ್ಲಿ ಅತ್ಯಂತ ಗೌರವಕ್ಕೆ ಪಾತ್ರರಾಗಿರುವ, ಬಿ.ಝಡ್. ಝಮೀರ್ ಅಹ್ಮದ್ ಖಾನ್ ಅವರು, ಮುಸ್ಲಿಂ ಸಮುದಾಯದ ನಾಯಕರೆಂದೇ ಖ್ಯಾತರು’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಇವರ ಬಗ್ಗೆ ಮಾನ್ಯ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು‌ ಆಡಿರುವ ಮಾತುಗಳು ಅಲ್ಪಸಂಖ್ಯಾತ ಸಮುದಾಯದ ಘನತೆಗೆ ಧಕ್ಕೆ ಉಂಟುಮಾಡುವಂತಿದೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಪೋಸ್ಟ್: ಅಬ್ದುಲ್ ಜಬ್ಬಾರ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ದಾವಣಗೆರೆ ದಕ್ಷಿಣ ಕ್ಷೇತ್ರವೆಂದರೆ ಅಲ್ಪಸಂಖ್ಯಾತರ ಭದ್ರಕೋಟೆ. ಸಚಿವರಾದ ಬಿ.ಝಡ್ ಝಮೀರ್ ಅಹ್ಮದ್ ಖಾನ್ ಅವರು ಅಲ್ಪಸಂಖ್ಯಾತ ಸಮುದಾಯವು ಅತ್ಯಂತ ಗೌರವಿಸುವ ವ್ಯಕ್ತಿ, ಜೊತೆಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಮು೦ಬರುವ ಉಪಚುನಾವಣೆಯ ಉಸ್ತುವಾರಿ ಸಮಿತಿಯ ಸದಸ್ಯರಾಗಿಯೂ ಕೆಪಿಸಿಸಿ ಝಮೀರ್ ಅಹ್ಮದ್ ಅವರನ್ನು ಆಯ್ಕೆಗೊಳಿಸಿದೆ’ ಎಂದು ಹೇಳಿದ್ದಾರೆ.

‘ಆದರೆ ಸಚಿವರಾದ ಎಸ್ ಎಸ್ . ಮಲ್ಲಿಕಾರ್ಜುನ್ ಅವರು ಸಾರ್ವಜನಿಕವಾಗಿ ಮಾಧ್ಯಮದೆದುರು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವುದಷ್ಟೇ ಅಲ್ಲದೇ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೂ ಝಮೀರ್ ಅಹ್ಮದ್ ಖಾನ್ ಅವರಿಗೂ ಯಾವುದೇ ಸಂಬಂಧವಿಲ್ಲ ಎಂಬಂತಹ ಮಾತುಗಳನ್ನು ಆಡಿದ್ದಾರೆ’ ಎಂದು ಹೇಳಿದ್ದಾರೆ.

‘ಪಕ್ಷದಲ್ಲೇ ಆಗಲೀ ಹೊರಗಾಗಲೀ ಒಬ್ಬರನ್ನೊಬ್ಬರು ಗೌರವಿಸುವುದು ಉತ್ತಮ ಸಂಸ್ಕಾರ. ಜನಾಬ್ ಝಮೀರ್ ಅಹ್ಮದ್ ಖಾನ್ ಅವರು ಇಡೀ ರಾಜ್ಯದ ಅಲ್ಪಸಂಖ್ಯಾತರ ನಾಯಕರೆಂಬ ಹೆಗ್ಗಳಿಕೆ ಹೊಂದಿದ್ದು, ಅಹಿಂದ ವರ್ಗದ ಗೌರವಕ್ಕೂ ಪಾತ್ರರಾದವರು. ಇವೆಲ್ಲ ವಿಷಯಗಳ ಅರಿವಿದ್ದೂ, ಅದನ್ನು ಕಡೆಗಣಿಸಿ, ಮಾನ್ಯ ಸಚಿವರು ಮಾಧ್ಯಮದೆದುರು ಆಡಿರುವ ಮಾತುಗಳು ಇಡೀ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವಂತದ್ದು’ ಎಂದು ಪೋಸ್ಟ್ ಹಾಕಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular