HomeLatest NewsBREAKING : ಹೊಸಪೇಟೆ ತಾ.ಪಂ ಕಾರ್ಯಾಲಯದಲ್ಲಿ ಅಗ್ನಿ ಅವಘಡ , ಪ್ರಮುಖ ದಾಖಲೆಗಳು ಸುಟ್ಟು ಭಸ್ಮ!

BREAKING : ಹೊಸಪೇಟೆ ತಾ.ಪಂ ಕಾರ್ಯಾಲಯದಲ್ಲಿ ಅಗ್ನಿ ಅವಘಡ , ಪ್ರಮುಖ ದಾಖಲೆಗಳು ಸುಟ್ಟು ಭಸ್ಮ!


ಹೊಸಪೇಟೆ (ವಿಜಯನಗರ): ಇಲ್ಲಿನ ತಾಲೂಕು ಪಂಚಾಯಿತಿ ಕಾರ್ಯಾಲಯದ ಸಭಾಂಗಣದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಕಚೇರಿಯಲ್ಲಿದ್ದ ಹಲವು ಪ್ರಮುಖ ದಾಖಲೆಗಳು ಹಾಗೂ ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಘಟನೆಯ ವಿವರ
ವಿಜಯನಗರ ಜಿಲ್ಲೆಯ ಹೊಸಪೇಟೆ ಟೌನ್ನಲ್ಲಿರುವ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗೆ ಸಭಾಂಗಣದಲ್ಲಿದ್ದ ಕಡತಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಘಟನಾ ಸ್ಥಳಕ್ಕೆ ಹೊಸಪೇಟೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಹೋಗಿರುವ ದಾಖಲೆಗಳ ಮಾಹಿತಿ ಹಾಗೂ ಆಸ್ತಿ ಪಾಸ್ತಿ ಹಾನಿಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಿಡಿಗೇಡಿಗಳ ಕೃತ್ಯವೇ ಎಂಬ ಶಂಕೆ ?
ಈ ಬೆಂಕಿ ಅವಘಡ ಆಕಸ್ಮಿಕವೋ ಅಥವಾ ಯಾರಾದರೂ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಎಸಗಿರುವ ಕೃತ್ಯವೋ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಂಶಯ ವ್ಯಕ್ತವಾಗಿದೆ. ಕಚೇರಿಯ ದಾಖಲೆಗಳನ್ನು ನಾಶಪಡಿಸುವ ಉದ್ದೇಶದಿಂದ ಈ ಕೃತ್ಯ ನಡೆದಿದೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.ಸದ್ಯ ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ. ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂದು ಪತ್ತೆ ಹಚ್ಚಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular