HomeLive NewsBREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ ಸೃಷ್ಟಿ.!

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ ಸೃಷ್ಟಿ.!

ಚಾಮರಾಜನಗರ  : ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ಭೀತಿ ಮೂಡಿಸಿದೆ. ಮಲೆ ಮಹದೇಶ್ವರ ಬೆಟ್ಟದ ‘ಆನೆ ತಲೆದಿಂಬ’ ಎಂಬ ಪ್ರದೇಶದ ಬಳಿ ಚಿರತೆ ಪ್ರತ್ಯಕ್ಷವಾಗಿದೆ.

ರಸ್ತೆಯ ಇಳಿಜಾರಿನ ತಿರುವಿನಲ್ಲಿರುವ ತಡೆಗೋಡೆಯ ಪಕ್ಕದಲ್ಲಿ ಚಿರತೆ ಕುಳಿತಿದ್ದನ್ನು ಕಂಡು, ಆ ಹಾದಿಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.ಕಳೆದ ಶಿವರಾತ್ರಿ ಜಾತ್ರೆಯ ಸಂದರ್ಭದಲ್ಲಿ ಇದೇ ಪ್ರದೇಶದ ಸಮೀಪ ಚಿರತೆಯು ಪಾದಯಾತ್ರಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ತಿಂದಿದ್ದ ಘಟನೆ ನಡೆದಿತ್ತು.ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಬೆಟ್ಟಕ್ಕೆ ಬರುವ ಭಕ್ತರು ಮತ್ತು ಕಾಲ್ನಡಿಗೆಯಲ್ಲಿ ಸಾಗುವ ಪಾದಯಾತ್ರಿಗಳಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ.

ಅರಣ್ಯ ಇಲಾಖೆಯು ಈ ಬಗ್ಗೆ ಗಮನ ಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular