HomeKarnatakaವಚನ ಕಲ್ಯಾಣ-ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ವಚನ ಕಲ್ಯಾಣ-ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ

ಶಿವಮೊಗ್ಗ :    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ವಚನ ಕಲ್ಯಾಣ’ ಎಂಬ ಅಹೋರಾತ್ರಿ (9 ಗಂಟೆಗಳ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಉದ್ದೇಶಿಸಿದ್ದು, ನುರಿತ ಹಾಗೂ ಆಸಕ್ತ ಯುವಕ/ಯುವತಿಯರು ಹಾಗೂ ಅನುಭವಿ ರಂಗ ಕಲಾವಿದರು/ಗಾಯಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಿತಿ 18 ರಿಂದ 40 ವರ್ಷಗಳ ಒಳಗಿನವರು ಅರ್ಜಿ ಸಲ್ಲಿಸಬಹುದಾಗಿದ್ದು ರಂಗಶಿಕ್ಷಣದಲ್ಲಿ ತರಬೇತಿ ಪಡೆದ ಹಾಗೂ ನಾಟಕದಲ್ಲಿ ಅಭಿನಯಿಸಿದ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೊನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್‌ಸೈಟ್ ವಿಳಾಸ kannadasiri.karnataka.gov.in ಇಲ್ಲಿ ಪಡೆದು, ಮಾ.20 ರೊಳಗಾಗಿ ಅರ್ಜಿಯನ್ನು ಭರ್ತಿಮಾಡಿ ಸದಸ್ಯ ಕಾರ್ಯದರ್ಶಿ, ಸಂತ ಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಮುದ್ದಾಂ ಅಥವಾ ಅಂಚೆಯ ಮೂಲಕ ಅಥವಾ ಇಮೇಲ್ ವಿಳಾಸ [email protected] ಮೂಲಕ ಸಲ್ಲಿಸಲು ಕೋರಿದೆ.

ಆಯ್ಕೆಯಾದ ಅಭ್ಯರ್ಥಿಗಳು ಮೂರು ತಿಂಗಳ ಕಾಲದ ಅವಧಿಯಲ್ಲಿ ಪೂರ್ಣಕಾಲಿಕ ತರಬೇತಿ ಪ್ರದರ್ಶನಗಳಲ್ಲಿ ಪಾಲ್ಗೊಳ್ಳುವುದು ಕಡ್ಡಾಯವಾಗಿದ್ದು, ಮಾಸಿಕ ಗೌರವಧನ ಮತ್ತು ಊಟ-ವಸತಿ ವ್ಯವಸ್ಥೆಯನ್ನು ಮಾಡಲಾಗುವುದು. ಹಾಗೂ ಸಂದರ್ಶನಕ್ಕೆ ಹಾಜರಾಗುವ ಕಲಾವಿದರಿಗೆ ಇಲಾಖೆಯು ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಚನ ಕಲ್ಯಾಣ ನಾಟಕದ ನಿರ್ದೇಶಕರಾದ ಬಸಲಿಂಗಯ್ಯ ಅಥವಾ ದೂ.ಸಂ:94485 38620 ನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಯೋಗ ನೀಡಲು ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಮತ್ತು ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡೇಟಾ(ರೆಸ್ಯೂಮ್) ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ:08182-255293, 9380663606 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular