HomeLatest Newsಕಾರು ಡ್ರೈವ್ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್

ಕಾರು ಡ್ರೈವ್ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಪ್ರಾಣ ಉಳಿಸಿದ ಟ್ರಾಫಿಕ್ ಪೊಲೀಸ್

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಾರು ಓಡಿಸುತ್ತಿದ್ದಾಗಲೇ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಕಾರು ಓಡಿಸುತ್ತಿದ್ದಾತನಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಅಡ್ಡಾದಿಡ್ಡಿ ಕಾರು ಚಲಾಯಿಸುತ್ತಿದ್ದಂತೆ ಅಲ್ಲೇಯೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಆಗಮಿಸಿ ಸಿಪಿಆರ್ ನೀಡಿ ಪ್ರಾಣ ಉಳಿಸಿದ್ದಾರೆ.

ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ಈ ಘಟನೆ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು. ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular