HomeKarnatakaಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಡಿಸೆಂಬರ್-2025ರ ಮಾಹೆಯ ಮಾಸಿಕ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 3,18,072 ಫಲಾನುಭವಿಗಳಿಗೆ ಸಂಬಂಧಿಸಿದಂತೆ ಒಟ್ಟು 63,61,44,000 ರೂ. ಮೊತ್ತವನ್ನು ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಈ ಹಣವು ಮುಂದಿನ 2-3 ದಿನಗಳ ಒಳಗಾಗಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಪ್ರಸಕ್ತ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಅಗತ್ಯವಿರುವ ಅನುದಾನವನ್ನು ಮೀಸಲಿಟ್ಟಿದೆ. ರಾಜ್ಯದ ಜನರ ಹಿತದೃಷ್ಟಿಯಿಂದ ಈ ಯೋಜನೆಗಳು ನಿರಂತರವಾಗಿ ಮುಂದುವರಿಯಲಿವೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ ಎಂದು ರೆಡ್ಡಿ ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular