HomeKarnataka56,000 ಖಾಲಿ ಹುದ್ದೆಗಳ ಭರ್ತಿಗೆ ನಿರ್ಧಾರ: ಶೀಘ್ರದಲ್ಲಿಯೇ ಪ್ರಕ್ರಿಯೆ ಆರಂಭ: ಸಚಿವ ಬೋಸರಾಜು

56,000 ಖಾಲಿ ಹುದ್ದೆಗಳ ಭರ್ತಿಗೆ ನಿರ್ಧಾರ: ಶೀಘ್ರದಲ್ಲಿಯೇ ಪ್ರಕ್ರಿಯೆ ಆರಂಭ: ಸಚಿವ ಬೋಸರಾಜು

ಬೆಂಗಳೂರು: 56,000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ನಿರ್ಧಾರ ಮಾಡಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಬೋಸರಾಜು ತಿಳಿಸಿದ್ದಾರೆ.

ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಶಶಿಲ್ ನಮೋಶಿ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 56432 ಹುದ್ದೆಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ. ಕ್ಯಾಬಿನೇಟ್ ನಲ್ಲಿಯೂ ಅನುಮತಿ ಸಿಕ್ಕಿದೆ. ನಿಯಮಗಳ ಪ್ರಕಾರ 371j ಅಡಿಯಲ್ಲಿಯೇ ನೇಮಕಾತಿ ನಡೆಯಲಿದೆ ಎಂದರು.

ಈ ತಿಂಗಳಲ್ಲಿ ಮತ್ತೊಂದು ಕ್ಯಾಬಿನೆಟ್ ಸಬ್ ಕಮಿಟಿ ಸಭೆ ಮಾಡಲಾಗುವುದು. 371j ಅಡಿ ನೇಮಕಾತಿ ಮಾಡದಿದ್ದರೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular