HomeKarnatakaಸಿಲಿಂಡರ್ ಕೊರತೆ: ಬಿಜೆಪಿ ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

ಸಿಲಿಂಡರ್ ಕೊರತೆ: ಬಿಜೆಪಿ ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಎಲ್ ಪಿಜಿ ಸಿಲಿಂಡರ್ ಕೊರತೆಯಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಬಿಜೆಪಿ ಸಂಸದರು ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿದ ಜನರಿಗೆ ನ್ಯಾಯ ಒದಗಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.

ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಚಾರದಲ್ಲಿ ಕೇಂದ್ರದ ಧೋರಣೆ ಖಂಡನೀಯ. ನಾಗರಕರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ನೋಡಿಕೊಳ್ಳಬೇಕು. ಮುಂದೆ ಪರಿಸ್ಥಿತಿ ಹೇಗಿರುತ್ತದೆಯೋ ಏನೋ. ಈಗಾಗಲೇ ಗ್ಯಾಸ್ ಚಾಲಿತ ಆಟೋ ಬಂದ್ ಆಗಿದ್ದು, ಸಮಸ್ಯೆ ಹೆಚ್ಚುತ್ತಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular