ವಿವಾಹದ ಬಳಿಕ ರಶ್ಮಿಕಾ ಮಂದಣ್ಣ ಭಾರೀ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಆಡಿಯೋ ಕ್ಲಿಪ್ ಸಂಚಲನ ಮೂಡಿಸಿದೆ. ಇದು ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್ ಅವರದ್ದು ಎನ್ನಲಾಗುತ್ತಿದೆ.
ಈ ಕುರಿತು ಗುರುವಾರ ಕನ್ನಡದಲ್ಲಿಯೇ ರಶ್ಮಿಕಾ ಮಂದಣ್ಣ ಪೋಸ್ಟ್ ಹಾಕಿದ್ದಾರೆ. ‘ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್ ಮಾಡಿದ್ದೀರ. ಅವರೆಲ್ಲರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಹೇಳಿದ್ದಾರೆ.
‘ಒಂದ್ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ – ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್ ಮಾತ್ನಾಡೋ ಜನ, ಒಂದ್ ಅರ್ಥ ಮಾಡ್ಕೊಬೇಕು – ಅವರೆಲ್ಲ ನನ್ನ ಜೀವನ ಹೇಗಿರಬೇಕು ಅಂತ ನಿರ್ಧಾರ ಮಾಡಕ್ಕಾಗತ್ತಾ?’ ಎಂದು ಪ್ರಶ್ನಿಸಿದ್ದಾರೆ.
‘ನಮ್ ಜೀವನ ನಮ್ದಲ್ವಾ?, ನಮ್ ನಿರ್ಧಾರ ನಾವೇ ತೊಗೋಬೇಕು ಮತ್ತೆ ತೊಗೋತೀವಿ ಕೂಡ’ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.
ವೈರಲ್ ಆಗಿರುವ ಆಡಿಯೋ: ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ವಿವಾಹದ ಬಳಿಕ ರಶ್ಮಿಕಾ ಅವರ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
21 ವರ್ಷದ ಹುಡುಗಿಯನ್ನ 35 ವರ್ಷ ಹುಡುಗನಿಗೆ ಮದುವೆ ಮಾಡಿ ಕೊಡಲು ಒಪ್ಪಿದ್ದೆ ನನ್ನ ದೊಡ್ಡತನ ಎಂದು ಸಹ ಆಡಿಯೋದಲ್ಲಿದೆ. ಇದು ರಶ್ಮಿಕಾ ಮಂದಣ್ಣ ರಕ್ಷಿತ್ ಶೆಟ್ಟಿ ಎಂಗೇಜ್‌ಮೆಂಟ್ ಮುರಿದು ಬೀಳಲು ಕಾರಣ ವಿವರಿಸಿದ ಆಡಿಯೋ ಎಂಬುದು ಸುದ್ದಿ.
ಮೂರು ದಿನಗಳಿಂದ ವೈರಲ್ ಆಗಿರುವ ಸುದ್ದಿಗೆ ಕನ್ನಡದಲ್ಲಿಯೇ ನಟಿ ರಶ್ಮಿಕಾ ಮಂದಣ್ಣ ಇಂದು ಪ್ರತಿಕ್ರಿಯೆ ನೀಡಿದ್ದಾರೆ.

