ಶಿವಮೊಗ್ಗ : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 14 ಮತ್ತು 15 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕುವೆಂಪುನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾç ಸಿಟಿ, ಮ್ಯಕ್ಸ್ ಲೇಔಟ್, ಎಂ.ಇ.ಎಸ್ ಲೇಔಟ್, ಚನ್ನಮುಂಬಾಪುರ, ಬಸವನ ಗಂಗೂರು, ರೆಡ್ಡಿ ಲೇಔಟ್,ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು,ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ
ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ, ರಂಗಾಯಣ, ಶಿವಮೊಗ್ಗ ಇಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ಪಿ ಲಂಕೇಶ್ ಬಯಲು ಮಂದಿರ’ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಇವರ ಘನ ಉಪಸ್ಥಿತಿ ಇರಲಿದ್ದು, ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಧಿಕಾರಿಗಳು, ರಂಗ ಸಮಾಜದ ಸದಸ್ಯರು, ರಂಗ ಕಲಾವಿದರು ಪಾಲ್ಗೊಳ್ಳುವರು.
ಉದ್ಘಾಟನಾ ಕಾರ್ಯಕ್ರಮದ ನಂತರ ಗುಡ್ಡಪ್ಪ ಜೋಗಿ ಅವರಿಂದ ತತ್ವಪದ ಗಾಯನ ಹಾಗೂ ರಂಗಾಯಣ ಮೈಸೂರು ಪ್ರಸ್ತುತಿಯ ಹಿರಿಯ ಕಲಾವಿದರ ಅಭಿಯನದ ಡಾ.ಸವಿತಾರಾಣಿ ಪರಿಕಲ್ಪನೆ, ವಿನ್ಯಾಸ ಮತ್ತು ನಿರ್ದೇಶನದ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನವಿದ್ದು ಪ್ರವೇಶ ಉಚಿತವಾಗಿರುತ್ತದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

