HomeKarnatakaBig Nes; ಯತೀಂದ್ರ ಬೆಂಬಲಿಸಿ ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕರೆ!

Big Nes; ಯತೀಂದ್ರ ಬೆಂಬಲಿಸಿ ತವರು ಕ್ಷೇತ್ರದಲ್ಲಿ ಸಿದ್ದರಾಮಯ್ಯ ಕರೆ!

ವರುಣಾ ಕ್ಷೇತ್ರದ ಹಾಲಿ ಶಾಸಕ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆಯೇ? ಎಂಬ ಚರ್ಚೆಗಳ ನಡುವೆಯೇ ಪುತ್ರ ಯತೀಂದ್ರ ಸಿದ್ದರಾಮಯ್ಯ ಬೆಂಬಲಿಸುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಶುಕ್ರವಾರ ಸಿಎಂ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಮಾರಂಭಕ್ಕೆ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪುತ್ರ ಯತೀಂದ್ರ ಜೊತೆ ರೋಡ್ ಶೋ ಮೂಲಕ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ತಮ್ಮ ರಾಜಕೀಯ ಏಳು-ಬೀಳುಗಳನ್ನು ನೆನಪು ಮಾಡಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಹೇಳಿದ್ದೇನು?

  • 1978ರಲ್ಲಿ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ.
  • ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ, ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದಾರೆ.
  • ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ. ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲು-ಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆತಿಲ್ಲ, ಮರೆಯುವುದಿಲ್ಲ.
  • ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ. ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಕೂಡ ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ.
  • ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ. –
  • ಭಕ್ತಿ ಪರಿಶುದ್ಧವಾಗಿರಬೇಕು ಮಾತ್ರವಲ್ಲ ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿ ಆಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ.
  • ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ.

ಯತೀಂದ್ರ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಉತ್ತರಾಧಿಕಾರಿ ಎಂಬುದು ಈಗಾಗಲೇ ಸ್ಪಷ್ಟವಾಗಿದೆ. 2018ರಲ್ಲಿ ಯತೀಂದ್ರ ಸಿದ್ದರಾಮಯ್ಯಗಾಗಿ ವರುಣಾವನ್ನು ಬಿಟ್ಟುಕೊಟ್ಟು ಸಿಎಂ ಸಿದ್ದರಾಮಯ್ಯ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು.

ಆಗ ಚುನಾವಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ 96,435 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. 2023ರ ಚುನಾವಣೆಯಲ್ಲಿ ತಂದೆಗಾಗಿ ಯತೀಂದ್ರ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟು ಚುನಾವಣೆಯಿಂದ ದೂರ ಉಳಿದರು. ಬಳಿಕ ಅವರನ್ನು ಎಂಎಲ್‌ಸಿ ಮಾಡಲಾಗಿದೆ.

2028ರಲ್ಲಿ ವರುಣಾದಲ್ಲಿ ಯತೀಂದ್ರ, ಸಿದ್ದರಾಮಯ್ಯ ಯಾರು ಕಾಂಗ್ರೆಸ್ ಅಭ್ಯರ್ಥಿ? ಎಂದು ಚರ್ಚೆಗಳು ಪ್ರಾರಂಭವಾಗಿವೆ. ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆಯೇ? ಎಂಬುದು ಸದ್ಯದ ಪ್ರಶ್ನೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular