HomeKarnataka2 ಟಿಎಂಸಿ ನೀರಿಗಾಗಿ ಮಹಾರಾಷ್ಟ್ರಕ್ಕೆ ಮನವಿ ಮಾಡಲಿದೆ ಕರ್ನಾಟಕ

2 ಟಿಎಂಸಿ ನೀರಿಗಾಗಿ ಮಹಾರಾಷ್ಟ್ರಕ್ಕೆ ಮನವಿ ಮಾಡಲಿದೆ ಕರ್ನಾಟಕ

ಕರ್ನಾಟಕದಲ್ಲಿ ಬೇಸಿಗೆಯ ಬಿಸಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ನಿರೀಕ್ಷೆ ಇದೆ. ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಸುಮಾರು 2–3 ಟಿಎಂಸಿ ನೀರು ನಷ್ಟವಾಗಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾಗಬಹುದು.

ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಎಲ್ಲಾ ತಾಲೂಕು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಹಾಗೂ ವಿವಿಧ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯಿತಿ ಸಿಇಓ ರಾಹುಲ್ ಶಿಂಧೆ, ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಭೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದರು. ಆದರೆ ಯಾವುದಾದರೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಕೊರತೆ ಉಂಟಾದಲ್ಲಿ, ತಕ್ಷಣ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ಸಚಿವರು ಸೂಚನೆ ನೀಡಿದರು.

ಟ್ಯಾಂಕರ್‌ಗಳಿಲ್ಲದ ಗ್ರಾಮ ಪಂಚಾಯಿತಿಗಳು ಅವುಗಳನ್ನು ಖರೀದಿಸುವಂತೆ ತಿಳಿಸಿದರು. ಏಪ್ರಿಲ್ ನಂತರ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ಕೊಟ್ಟರು.

ಹಿಪ್ಪರಗಿ ಬ್ಯಾರೇಜ್‌ನ 22ನೇ ಕ್ರಸ್ಟ್ ಗೇಟ್ ಮುರಿದು ಸುಮಾರು 2–3 ಟಿಎಂಸಿ ನೀರು ನಷ್ಟವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದಿಂದ ಸುಮಾರು 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದರು.

ಸಚಿವರು ಮಾತನಾಡಿ, “ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಮ್ಯಾಪಿಂಗ್ ಕಾರ್ಯ ಸುಮಾರು ಶೇ 85ರಷ್ಟು ಪೂರ್ಣಗೊಂಡಿದ್ದು, ಅದನ್ನು ಶೇ 92ರ ಗುರಿಗೆ ತಲುಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಮತದಾರರ ಕುರಿತಾದ ಆರೋಪಗಳ ಬಗ್ಗೆ ಮುಂದಿನ ವಾರ ಮತ್ತೊಂದು ಸಭೆ ನಡೆಸಲಾಗುತ್ತದೆ” ಎಂದರು.

ಈ ಸಂದರ್ಭದಲ್ಲಿ ಸಚಿವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ನೂತನ ಜಿಲ್ಲಾಡಳಿತ ಭವನ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ಅವುಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular