HomeKarnatakaBREAKING: ಒಂಟಿಯಾಗಿ ವಾಸವಾಗಿದ್ದ ವೃದ್ಧನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

BREAKING: ಒಂಟಿಯಾಗಿ ವಾಸವಾಗಿದ್ದ ವೃದ್ಧನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ಯಾದಗಿರಿ: ಜಮೀನಿನಲ್ಲಿ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧನೊಬ್ಬನನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಯಾದಗಿಯಲ್ಲಿ ನಡೆದಿದೆ.

ಇಲ್ಲಿನ ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. 76 ವರ್ಷದ ಹಂಪಣ್ಣ ಸಜ್ಜನ ಕೊಲೆಯಾದ ದುರ್ದೈವಿ. ಹಂಪಣ್ಣ ಸಜ್ಜನ ಅವರಿಗೆ ಮೂವರು ಗಂಡು ಮಕ್ಕಳಿದ್ದು, 15 ವರ್ಷಗಳ ಹಿಂದೆಯೇ ಆಸ್ತಿ ಹಂಚಿಕೆ ಮಾಡಿ ತನಗಾಗಿ 12 ಎಕರೆ ಜಮೀನು ಉಳಿಸಿಕೊಂಡಿದ್ದರು. 12 ವರ್ಷಗಳ ಹಿಂದೆ ಪತ್ನಿ ನಿಧನರಾದ ಬಳಿಕ, ಮಕ್ಕಳು ಗ್ರಾಮದಲ್ಲಿದ್ದರೂ ಹಂಪಣ್ಣ ಜಮೀನಿನಲ್ಲಿ ಪುಟ್ಟ ಮನೆ ನಿರ್ಮಿಸಿಕೊಂಡು ಒಬ್ಬಂಟಿಯಾಗಿ ವಾಸವಿದ್ದರು.

ರಾತ್ರಿ ಯಾರೋ ದುಷ್ಕರ್ಮಿಗಳು ಹಂಪಣ್ಣ ಮಲಗಿದ್ದಾಗ ಕಲ್ಲಿನಿಂದ ತಲೆ ಜಜ್ಜಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇಂದು ಮುಂಜಾನೆ ಗ್ರಾಮಕ್ಕೆ ಹಾಲು ಪಡೆಯಲು ವೃದ್ಧ ಬಾರದಿದ್ದಾಗ ಅನುಮಾನಗೊಂಡು ಜಮೀನಿಗೆ ಹೋಗಿ ನೋಡಿದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ವಡಗೇರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯಾದಗಿರಿ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular