ಬೆಂಗಳೂರು: ಮಾರ್ಚ್ 27ರಂದು ನಡೆಯುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಮುದಾಯದ ಸಚಿವರು ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸಹಕಾರ ನೀಡಬೇಕು ಎಂದು ಒಳ ಮೀಸಲಾತಿ ಹೋರಾಟ ಸಮಿತಿಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿಗೆ ಒತ್ತಾಯಿಸುತ್ತಿದ್ದೇವೆ. ಯಾವುದೇ ಸಮುದಾಯದ ವಿರುದ್ಧವಾಗಿ ಹೋರಾಟ ನಡೆಸುತ್ತಿಲ್ಲ. ನಮ್ಮ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಒಳ ಮೀಸಲಾತಿ ಇಲ್ಲದೆ ಯಾವುದೇ ಹುದ್ದೆಗಳನ್ನು ಭರ್ತಿ ಮಾಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ ಎಂದರು.
ಮಾರ್ಚ್ 27ರ ವಿಶೇಷ ಸಂಪುಟ ಸಭೆಯಲ್ಲಿ ಒಳ ಮಿಸಲಾತಿಗೆ ಸಂಬಂಧಿಸಿದಂತೆ ಎಲ್ಲಾ ಸಮುದಾಯ ಸಚಿವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಎಂ. ಗುರುಮೂರ್ತಿ, ಅಂಬಣ್ಣ ಅರೋಲಿಕರ್, ಬಿ. ನರಸಪ್ಪಇದ್ದರು.

