HomeKarnatakaರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ನೀಗಿಸಲು ಇಂದು ಸರ್ಕಾರದ ಮಹತ್ವದ ಸಭೆ

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ನೀಗಿಸಲು ಇಂದು ಸರ್ಕಾರದ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಸಂಜೆ ಅನಿಲ ಕಂಪನಿಗಳ ಜೊತೆಗೆ ಸಭೆ ನಡೆಸಲಾಗುವುದು.

ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದು, ಸೋಮವಾರ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ಗ್ಯಾಸ್ ಕಂಪನಿಗಳ ಜೊತೆ ಸಭೆ ನಡೆಯಲಿದೆ. ಹೋಟೆಲ್ ಗಳಿಗೆ ಸ್ವಲ್ಪ ಸಿಲಿಂಡರ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ ಆಗಮಿಸಿರುವುದರಿಂದ ಅನುಕೂಲವಾಗಲಿದೆ ಎಂದು ಭಾವಿಸಿದ್ದೇವೆ. ಯುದ್ಧ ಮುಂದುವರೆದಿದೆ. ಗ್ಯಾಸ್ ಬಳಕೆಯಲ್ಲಿ ಮಿತವ್ಯಯ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular