ಬೆಂಗಳೂರು : ಯುಗಾದಿ ಮತ್ತು ಈದ್-ಉಲ್-ಫಿತ್ರ್ ಹಬ್ಬಗಳ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳುವ ಪ್ರಯಾಣಿಕರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬರೋಬ್ಬರಿ 2,000 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಿದೆ.
ಯಾವಾಗ ಸೌಲಭ್ಯ ಲಭ್ಯ?: ಮಾರ್ಚ್ 18, 19 ಮತ್ತು 20 ರಂದು ಬೆಂಗಳೂರಿನಿಂದ ವಿವಿಧ ಊರುಗಳಿಗೆ ತೆರಳಲು ಹಾಗೂ ಮಾರ್ಚ್ 22 ರಂದು ಮರಳಿ ಬೆಂಗಳೂರಿಗೆ ಬರಲು ಈ ವಿಶೇಷ ಬಸ್‌ಗಳು ಸಂಚರಿಸಲಿವೆ.
ಎಲ್ಲಿಂದ ಸಂಚಾರ?: ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್ ): ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಕಲಬುರಗಿ, ಬಳ್ಳಾರಿ ಮುಂತಾದ ಕಡೆಗಳಿಗೆ
ಟಿಕೆಟ್ ದರದಲ್ಲಿ ರಿಯಾಯಿತಿ: ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಮುಂಗಡ ಬುಕ್ಕಿಂಗ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ.ಹೋಗುವ ಮತ್ತು ಬರುವ (Return journey) ಟಿಕೆಟ್ ಒಟ್ಟಿಗೆ ಬುಕ್ ಮಾಡಿದರೆ ಶೇ. 10ರಷ್ಟು ರಿಯಾಯಿತಿ ಸಿಗಲಿದೆ.
ಬುಕ್ಕಿಂಗ್ ಹೇಗೆ ?
ಪ್ರಯಾಣಿಕರು KSRTCಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ರಾಜ್ಯದಾದ್ಯಂತ ಇರುವ ಕೌಂಟರ್‌ಗಳಲ್ಲಿ ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬಹುದು. ಹಬ್ಬದ ರಶ್ ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣಿಕರು ಇದರ ಲಾಭ ಪಡೆಯುವಂತೆ ಸಂಸ್ಥೆ ಕೋರಿದೆ.
ಸೌಲಭ್ಯ / ಸೂಚನೆಗಳು:
- ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಿರುವ ಟಿಕೆಟ್‌ಗಳ ಮೇಲೆ ನಮೂದಿಸಿರುವ ಬಸ್ ನಿಲ್ದಾಣ/ಪಿಕ್ ಅಪ್ ಪಾಯಿಂಟ್‌ನ್ನು ಗಮನಿಸುವುದು.
- ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿ ರಾಜ್ಯಗಳ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನ ಕಾಯ್ದಿರಿಸುವ ಕೌಂಟರ್‌ಗಳಲ್ಲಿ ಸಹ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
- ಹೆಚ್ಚುವರಿ ಸಾರಿಗೆಗಳ ವಿವರ, ಹೊರಡುವ ಸ್ಥಳ/ವೇಳಾ ವಿವರಗಳನ್ನು ಮುಂಗಡ ಆಸನ ಕಾಯ್ದಿರಿಸುವ ಅಂತರ್ಜಾಲ ಹಾಗೂ ನಿಗಮದ ವೆಬ್‌ಸೈಟ್‌ನಲ್ಲಿ ಲಭ್ಯ.
- ನಿಗಮದ ವ್ಯಾಪ್ತಿಯ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ.


