HomeKarnatakaGood News: ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ, ವೇಳಾಪಟ್ಟಿ

Good News: ತುಂಗಭದ್ರಾ ಡ್ಯಾಂನಿಂದ ನೀರು ಬಿಡುಗಡೆ, ವೇಳಾಪಟ್ಟಿ

ಮೂರು ರಾಜ್ಯಗಳ ಜೀವನಾಡಿಯಾಗಿರುವ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್ ಅಳವಡಿಕೆ ಪ್ರಕ್ರಿಯೆ ಚುರುಕಾಗಿ ನಡೆಯುತ್ತಿದೆ. ಮೇ ತಿಂಗಳ ಒಳಗೆ ಎಲ್ಲಾ 33 ಗೇಟ್‌ಗಳ ಅಳವಡಿಕೆ ಪೂರ್ಣಗೊಳ್ಳಲಿದೆ ಎಂದು ಅಂದಾಜಿಸಲಾಗಿದೆ.

ಬೇಸಿಗೆಯ ಹಿನ್ನಲೆಯಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲು ನಿರ್ಧಾರ ಮಾಡಲಾಗಿದೆ. ನೀರು ಹರಿಸುವ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ 2025-26ನೇ ಜಲವರ್ಷದಲ್ಲಿ ನೀರಿನ ಲಭ್ಯತೆ ಆಧರಿಸಿ ಪ್ರಾದೇಶಿಕ ಆಯುಕ್ತರು ಕಲಬುರಗಿ ಇವರ ಆದೇಶದ ಮೇರೆಗೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ತುಂಗಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ಪ್ರಾದೇಶಿಕ ಆಯುಕ್ತರು, ಕಲಬುರಗಿ ವಲಯ ನಿಗದಿಪಡಿಸಿದ ವೇಳಾಪಟ್ಟಿಯಂತೆ ನೀರಿನ್ನು ಹರಿಸಲು ನಿರ್ಧಾರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದರಂತೆ ಸಂಬಂಧಿಸಿದ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಮ್ಮ ವ್ಯಾಪ್ತಿಯಲ್ಲಿನ ತೂಬುಗಳ ಗೇಟ್‌ಗಳ ಮುಖಾಂತರ ಕೆರೆಕಟ್ಟೆಗಳಲ್ಲಿ ಕುಡಿಯುವ ಸಲುವಾಗಿ ನೀರು ಶೇಖರಣೆ ಮಾಡಲು ಹಾಗೂ ನಿಗದಿತ ಪ್ರಮಾಣದ ನೀರನ್ನು 104 ಮೈಲ್ ವರೆಗೆ ಹರಿಸಿ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಹಾಗೂ ಪೊಲೀಸ್ ಸಿಬ್ಬಂದಿ ಸಹಯೋಗದೊಂದಿಗೆ ಸಮರ್ಪಕ ನೀರು ನಿರ್ವಹಣೆ ಮಾಡಬೇಕು ಎಂದು ಸೂಚಿಸಲಾಗಿದೆ.

ನಿಗದಿತ ವೇಳಾಪಟ್ಟಿ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ (0 ರಿಂದ 104 ಮೈಲ್ ವರೆಗೆ) ಕುಡಿಯುವ ನೀರಿಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮಗಳ ವ್ಯಾಪ್ತಿಯಲ್ಲಿರುವ ನೀರಿನ ಕೆರೆಗಳನ್ನು ತುಂಬಿಸಲು ಮಾರ್ಚ್ 16 (ಸೋಮವಾರ ಬೆಳಗ್ಗೆ 8 ಗಂಟೆ) ರಿಂದ ಮಾರ್ಚ್ 27ರ (ಶುಕ್ರವಾರ ಬೆಳಗ್ಗೆ 8 ಗಂಟೆ) ವರೆಗೆ 2000 ಕ್ಯೂಸೆಕ್‌ನಂತೆ ಕುಡಿಯುವ ನೀರು ಹರಿಸಲಾಗುವುದು.

ಅದರಂತೆ, ಯರಮರಸ್ ವಿಭಾಗ ಮಾರ್ಚ್ 19,  20 & ಮಾ. 21ರ ವರೆಗೆ, ಸಿರವಾರ ವಿಭಾಗ ಮಾ. 21, 22 & 23 ರವರೆಗೆ, ಸಿಂಧನೂರು ವಿಭಾಗ ಮಾ. 24, 25 & ಮಾ. 26ರ ವರೆಗೆ ಹಾಗೂ ವಡ್ಡರಹಟ್ಟಿ ವಿಭಾಗದ ಮಾ. 26 & ಮಾ. 27ರ ವರೆಗೆ ನೀರು ಹರಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.

ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಗೆ ನೀರು ಹರಿಸಲಾಗುತ್ತಿದೆ ಎಂದು ರೈತ ಭಾಂದವರಿಗೆ ತಿಳಿಸಲಾಗಿದೆ.

ಕಾಲುವೆಯಲ್ಲಿ ಮತ್ತು ಕಾಲುವೆಯ ಅಂಚಿನಲ್ಲಿ ಓಡಾಡುವುದು, ಕಾಲುವೆಯಿಂದ ನೀರನ್ನು ಜನಸಾಮಾನ್ಯರು ಅಥವಾ ರೈತರು ಬಳಸುವುದನ್ನು ಮತ್ತು ಎತ್ತಿಕೊಳ್ಳುವುದನ್ನು ನಿಷೇಧಗೊಳಿಸಲಾಗಿರುತ್ತದೆ.

ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸುವಂತೆ ಕನೀನಿನಿ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್.ಬಿ ಮಲ್ಲಿಗವಾಡ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular