HomeKarnatakaದೈಹಿಕ ಶಿಕ್ಷಣ ಶಿಕ್ಷಕರು ಸೇರಿ 15000 ಶಿಕ್ಷಕರ ನೇಮಕ, ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕಾತಿ

ದೈಹಿಕ ಶಿಕ್ಷಣ ಶಿಕ್ಷಕರು ಸೇರಿ 15000 ಶಿಕ್ಷಕರ ನೇಮಕ, ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ ವೇಳೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಚಿದಾನಂದ ಎಂ. ಗೌಡ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದು, ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ 3361, ಪ್ರೌಢಶಾಲೆಗಳಲ್ಲಿ 1861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇವೆ. ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ,

ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ದೈಹಿಕ ಶಿಕ್ಷಣ ಶಿಕ್ಷಕರ ಖಾಲಿ ಹುದ್ದೆಗಳು ಸೇರಿದಂತೆ 5262 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದ್ದಾರೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಸಂಯುಕ್ತ ಪದವಿ ಕಾಲೇಜುಗಳಿಂದ ಬೇರ್ಪಟ್ಟ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಪರಿಶೀಲಿಸಲಾಗುವುದು. ಕಾರ್ಯಭಾರ ಆಧರಿಸಿ ಶಿಕ್ಷಕರ ನೇಮಕ ಮಾಡಲಾಗುವುದು. ವಿಷಯವಾರು ಹೊಸದಾಗಿ ಸೃಷ್ಟಿಸಬೇಕಾದ ಹುದ್ದೆಗಳ ಪ್ರಸ್ತಾವನೆ ಪರಿಶೀಲಿಸಲಾಗುತ್ತಿದೆ ಎಂದು ಬಿಜೆಪಿ ಸದಸ್ಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular