HomeKarnatakaRain alert : ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾ.21 ರವರೆಗೆ ಭಾರಿ ಮಳೆ ;...

Rain alert : ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾ.21 ರವರೆಗೆ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ


ಬೆಂಗಳೂರು: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದ್ದು, ಸುಡುವ ಬಿಸಿಲಿನ ನಡುವೆಯೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಧಾರವಾಡ ಮತ್ತು ದಕ್ಷಿಣ ಕನ್ನಡದ ಧರ್ಮಸ್ಥಳ ಸೇರಿದಂತೆ ಹಲವೆಡೆ ಮಳೆಯ ಸಿಂಚನವಾಗಿದೆ.

ಮಳೆ ಮುನ್ಸೂಚನೆ ಇರುವ ಜಿಲ್ಲೆಗಳು: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ; ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ 5 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಅದೇ ರೀತಿ ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಿಂಚನವಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಹವಾಮಾನ: ರಾಜಧಾನಿ ಬೆಂಗಳೂರಿನಲ್ಲಿ ಮಾರ್ಚ್ 17ರವರೆಗೆ ಆಕಾಶ ಶುಭ್ರವಾಗಿರಲಿದ್ದು, ಮಳೆಯ ಮುನ್ಸೂಚನೆ ಇಲ್ಲ. ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.

ತಾಪಮಾನ ಏರಿಕೆ: ಒಂದು ಕಡೆ ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ತಾಪವೂ ಏರುತ್ತಿದೆ. ಕಲಬುರಗಿಯಲ್ಲಿ ರಾಜ್ಯದ ಅತಿ ಗರಿಷ್ಠ ತಾಪಮಾನ 38.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಳೆ ಅನಾಹುತ: ಇತ್ತೀಚೆಗೆ ಸುರಿದ ಮಳೆಗೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೆ, ಬೆಳಗಾವಿಯ ಆಟೋ ನಗರದಲ್ಲಿ ಗಾಳಿ ಮಳೆಗೆ ಮರಗಳು ಉರುಳಿ ಬಿದ್ದಿವೆ.ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ವಿಸ್ತರಿಸಿರುವ ಮೇಲ್ಮೈ ಸುಳಿಗಾಳಿ ಮತ್ತು ವಾಯುಮಂಡಲದ ಬದಲಾವಣೆಗಳಿಂದಾಗಿ ರಾಜ್ಯದ ವಿವಿಧೆಡೆ ಮೋಡ ಕವಿದ ವಾತಾವರಣ ಹಾಗೂ ಮಳೆಯಾಗುತ್ತಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಿಂದ ತಂಪು ವಾತಾವರಣ ನಿರ್ಮಾಣವಾಗಿದ್ದರೆ, ಬಯಲು ಸೀಮೆ ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ರಣಬಿಸಿಲು ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular