HomeKarnatakaSHOCKING: ತೋಟದಲ್ಲಿ ಕೆಲಸ ಮಾಡುವಾಗ ಜೇನುಹುಳಗಳ ದಾಳಿಗೆ ರೈತ ಬಲಿ

SHOCKING: ತೋಟದಲ್ಲಿ ಕೆಲಸ ಮಾಡುವಾಗ ಜೇನುಹುಳಗಳ ದಾಳಿಗೆ ರೈತ ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಜೇನುಹುಳಗಳ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ.

ಸಖರಾಯಪಟ್ಟಣ ನಿವಾಸಿ ಕರಿಯಾನಾಯ್ಕ(61) ಮೃತಪಟ್ಟವರು. ಶನಿವಾರ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ ಕರಿಯಾನಾಯ್ಕ ಅವರ ಮೇಲೆ ಜೇನು ಹುಳಗಳು ದಾಳಿ ಮಾಡಿವೆ. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಸಖರಾಯಪಟ್ಟಣದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular