HomeLatest NewsSHOCKING : ರೀಲ್ಸ್ ಹುಚ್ಚಾಟ ; ಟ್ರಕ್ ಡಿಕ್ಕಿಯಾಗಿ ಯುವಕ ದುರ್ಮರಣ, ಭಯಾನಕ ವಿಡಿಯೋ ವೈರಲ್...

SHOCKING : ರೀಲ್ಸ್ ಹುಚ್ಚಾಟ ; ಟ್ರಕ್ ಡಿಕ್ಕಿಯಾಗಿ ಯುವಕ ದುರ್ಮರಣ, ಭಯಾನಕ ವಿಡಿಯೋ ವೈರಲ್ |WATCH VIDEO

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ’ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೊಯಿನ್ ಎಂಬ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೊಯಿನ್ ತನ್ನ ಸ್ನೇಹಿತ ಸಾದ್ ಜೊತೆ ಸೇರಿ ರಸ್ತೆಯ ಮಧ್ಯೆ ಇನ್‌ಸ್ಟಾಗ್ರಾಮ್ ರೀಲ್ಸ್ ಚಿತ್ರೀಕರಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಮೊಯಿನ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಸ್ನೇಹಿತ ಸಾದ್ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿಡಿಯೋ ಚಿತ್ರೀಕರಿಸುತ್ತಿದ್ದ ಮೂರನೇ ಸ್ನೇಹಿತ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಬಳಿ ಈ ಘಟನೆ ನಡೆದಿದೆ.

ಮೊಹಮ್ಮದ್ ಮೊಯಿನ್ ಮತ್ತು ಮೊಹಮ್ಮದ್ ಶಾದ್ ಎಕ್ಸ್‌ಪ್ರೆಸ್‌ವೇನಲ್ಲಿ ರೀಲ್ಸ್ ಮಾಡುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಇವರಿಗೆ ಡಿಕ್ಕಿ ಹೊಡೆದಿದೆ.ಅಪಘಾತಕ್ಕೆ ಕಾರಣವಾದ ವಾಹನವು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಈ ಘಟನೆಯ ಬೆನ್ನಲ್ಲೇ ಸರ್ಕಾರ ಮತ್ತು ಪೊಲೀಸ್ ಇಲಾಖೆಯು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ:ಹೈ-ಸ್ಪೀಡ್ ಎಕ್ಸ್‌ಪ್ರೆಸ್‌ವೇಗಳಲ್ಲಿ ನಡೆಯುವುದು, ವಾಹನ ನಿಲ್ಲಿಸುವುದು ಅಥವಾ ವಿಡಿಯೋ ಚಿತ್ರೀಕರಿಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈಗಾಗಲೇ ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಭೀಕರ ವಿಡಿಯೋ ವೈರಲ್ ಆಗಿದ್ದು, ರಸ್ತೆ ಸುರಕ್ಷತೆಯ ಬಗ್ಗೆ ದೊಡ್ಡ ಚರ್ಚೆ ಮುನ್ನೆಲೆಗೆ ಬಂದಿದೆ.

View this post on Instagram

A post shared by News Anek (@newsanek24)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular