ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 5,202 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿಯ ಮೂಲಕ ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು, ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನೂ ಒಳಗೊಂಡಿವೆ. ಉಳಿದ ನೇರ ನೇಮಕಾತಿಗಳಲ್ಲೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ ವೇಳೆ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗುವುದು. ಪ್ರಸ್ತುತ ಪ್ರಾಥಮಿಕ ಶಾಲೆಗಳಲ್ಲಿ 3361, ಪ್ರೌಢಶಾಲೆಗಳಲ್ಲಿ 1861 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಖಾಲಿ ಇವೆ. ದೈಹಿಕ ಶಿಕ್ಷಣ ಶಿಕ್ಷಕರು ಸೇರಿದಂತೆ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಹೇಳಿದ್ದಾರೆ,

