HomeKarnatakaBreaking News: ಬಾಗಲಕೋಟೆ ಉಪ ಚುನಾವಣೆ, ಎಚ್.ವೈ.ಮೇಟಿ ಕುಟುಂಬದವರ ಜೊತೆ ಸಿದ್ದರಾಮಯ್ಯ ಸಭೆ

Breaking News: ಬಾಗಲಕೋಟೆ ಉಪ ಚುನಾವಣೆ, ಎಚ್.ವೈ.ಮೇಟಿ ಕುಟುಂಬದವರ ಜೊತೆ ಸಿದ್ದರಾಮಯ್ಯ ಸಭೆ

ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಎಚ್.ವೈ.ಮೇಟಿ ನಿಧನದ ಕಾರಣ ಉಪ ಚುಣಾವಣೆ ನಡೆಯುತ್ತಿದೆ.

ಉಪ ಚುನಾವಣೆಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಎಚ್.ವೈ.ಮೇಟಿ ಕುಟುಂಬದಲ್ಲಿಯೇ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದರು.

ಈ ಕುರಿತು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದೆ’ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿಗೆ ಬಂದು ಭೇಟಿಯಾಗುವಂತೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದ ಹಿನ್ನಲೆಯಲ್ಲಿ ಬುಧವಾರ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರು ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

ಎಚ್.ವೈ.ಮೇಟಿ ಪುತ್ರಿ ಮಹಾದೇವಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಮಾರ್ಚ್ 20ರ ಶುಕ್ರವಾರ ಬಾಗಲಕೋಟೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದ್ದರು. ಆದ್ದರಿಂದ ಅಭ್ಯರ್ಥಿ ಘೋಷಣೆ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿತ್ತು.

ಕಳೆದ ಶನಿವಾರ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ‘ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೆಚ್.ವೈ ಮೇಟಿ ಕುಟುಂಬದವರೂ ಒಬ್ಬ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು. ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ” ಎಂದು ಹೇಳಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular