HomeKarnatakaBIG NEWS : ರಾಜ್ಯದಲ್ಲಿ ಇನ್ನೂ 1 ವಾರ 'ಕಮರ್ಷಿಯಲ್ ಸಿಲಿಂಡರ್' ಪೂರೈಕೆ  ಕಷ್ಟ :...

BIG NEWS : ರಾಜ್ಯದಲ್ಲಿ ಇನ್ನೂ 1 ವಾರ ‘ಕಮರ್ಷಿಯಲ್ ಸಿಲಿಂಡರ್’ ಪೂರೈಕೆ  ಕಷ್ಟ : ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಇಸ್ರೇಲ್-ಇರಾನ್ ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಡುಗೆ ಅನಿಲದ (LPG) ತೀವ್ರ ಅಭಾವ ಸೃಷ್ಟಿಯಾಗಿದೆ ಎಂಬ ವದಂತಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ  ಇನ್ನೂ 1 ವಾರ ಕಮರ್ಷಿಯಲ್ ಸಿಲಿಂಡರ್ ಪೂರೈಸುವುದು ಕಷ್ಟ ಎಂದು  ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಮನೆಗಳಿಗೆ ತೊಂದರೆಯಿಲ್ಲ: ವಿಧಾನಸಭೆ ಮತ್ತು ಪರಿಷತ್ತಿನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, “ಒಂದು ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ನೀಡಲು ನಮಗೆ ಯಾವುದೇ ಸಮಸ್ಯೆಯಿಲ್ಲ. ಸದ್ಯದ ದಾಸ್ತಾನು 10 ದಿನಗಳಿಗೆ ಸಾಕಾಗುವಷ್ಟಿದೆ ಮತ್ತು ಹಡಗುಗಳು ಮುಂಬೈ ತಲುಪುತ್ತಿವೆ. ಹೀಗಾಗಿ ಸಾರ್ವಜನಿಕರು ಗಾಬರಿಯಿಂದ ಹೆಚ್ಚಿನ ಸಿಲಿಂಡರ್ ಬುಕ್ ಮಾಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಹೋಟೆಲ್‌ಗಳಿಗೆ ಪರ್ಯಾಯ ವ್ಯವಸ್ಥೆ ಅನಿವಾರ್ಯ: ವಾಣಿಜ್ಯ (Commercial) ಸಿಲಿಂಡರ್‌ಗಳ ವಿಚಾರದಲ್ಲಿ ಮಾತ್ರ ಕೊರತೆ ಇರುವುದನ್ನು ಸಚಿವರು ಒಪ್ಪಿಕೊಂಡಿದ್ದಾರೆ. “ವಾಣಿಜ್ಯ ಸಿಲಿಂಡರ್‌ಗಳ ದಾಸ್ತಾನು ಕಡಿಮೆ ಇರುವುದರಿಂದ ಹೋಟೆಲ್ ಮಾಲೀಕರು ಸಹಕರಿಸಬೇಕು. ಮುಂದಿನ 7 ರಿಂದ 10 ದಿನಗಳವರೆಗೆ ಹೋಟೆಲ್‌ಗಳಲ್ಲಿ ಎಲೆಕ್ಟ್ರಿಕ್ ಸ್ಟೌವ್‌ಗಳಂತಹ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಸೂಕ್ತ” ಎಂದು ಅವರು ಸಲಹೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ಯತೆ ಯಾರಿಗೆ ?: ಇರುವ ಅಲ್ಪ ಪ್ರಮಾಣದ ವಾಣಿಜ್ಯ ಸಿಲಿಂಡರ್‌ಗಳನ್ನು ಮೊದಲು ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳು ಮತ್ತು ವಸತಿ ಶಾಲೆಗಳಿಗೆ ಪೂರೈಸಲು ಸರ್ಕಾರ ಆದ್ಯತೆ ನೀಡಿದೆ. ಹೋಟೆಲ್ ಉದ್ಯಮವು ತಾತ್ಕಾಲಿಕವಾಗಿ ಈ ಸಂಕಷ್ಟಕ್ಕೆ ಹೊಂದಿಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

ಕೇಂದ್ರದೊಂದಿಗೆ ಸಮನ್ವಯ : ಇರಾನ್‌ನ ಹರ್ಮುಜ್ ಜಲಸಂಧಿಯ ಮೂಲಕ ಅನಿಲ ಹೊತ್ತ ಹಡಗುಗಳು ಬರಲು ತಡವಾಗುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರತಿ ವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಮುನಿಯಪ್ಪ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular