HomeKarnatakaಕನ್ನಡತಿ ಪ್ರೀತಿ ಈಗ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್

ಕನ್ನಡತಿ ಪ್ರೀತಿ ಈಗ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆದಿದ್ದು, ಕನ್ನಡಿಗರು ಆಯ್ಕೆಯಾಗಿದ್ದಾರೆ. ವಾರ್ಡ್‌ ನಂಬರ್ 25ರ ಪಾಲಿಕೆ ಸದಸ್ಯೆ ಪ್ರೀತಿ ವಿನಾಯಕ ಕಾಮಕರ ಬೆಳಗಾವಿಯ ನೂತನ ಮೇಯರ್ ಆಗಿದ್ದಾರೆ.

ಬುಧವಾರ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಬಿಜೆಪಿಯ ಪ್ರೀತಿ ವಿನಾಯಕ ಕಾಮಕರ 39 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿಯಾಗಿದ್ದ ಕಾಂಗ್ರೆಸ್‌ನ ಖುರ್ಷಿದಾ ದಾದಾಪೀರ 29 ಮತಗಳನ್ನು ಪಡೆದು ಸೋತರು.

ಉಪ ಮೇಯರ್ ಆಗಿ ವಾರ್ಡ್‌ ನಂಬರ್ 47ರ ಬಿಜೆಪಿ ಸದಸ್ಯ ಹನುಮಂತ ಕೊಂಗಾಲಿ ಆಯ್ಕೆಯಾದರು. ಅವರು 39 ಮತಗಳನ್ನು ಪಡೆದು ಜಯಗಳಿಸಿದರು. ಎದುರಾಳಿ ಕಾಂಗ್ರೆಸ್‌ನ ಮೋದಿನಸಾಬ್ 20 ಮತಗಳನ್ನು ಪಡೆದು ಸೋಲು ಕಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಕಾರ ಸಮಯದಾಯದ ಪ್ರೀತಿ ವಿನಾಯಕ ಕಾಮಕರ ಮತ್ತು ಲಿಂಗಾಯತ ಸಮುದಾಯದ  ಹನುಮಂತ ಕೊಂಗಾಲಿ ಮೇಯರ್ ಮತ್ತು ಉಪ ಮೇಯರ್ ಆಗಿ ಆಯ್ಕೆಯಾಗಿದ್ದು, ಕನ್ನಡಿಗರಿಗೆ ಮೇಯರ್ ಮತ್ತು ಉಪ ಮೇಯರ್ ಪಟ್ಟ ಸಿಕ್ಕಿದೆ.

 ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಕೆ.ಎಂ.ಜಾನಕಿ ಅವರ ನೇತೃತ್ವದಲ್ಲಿ ಬೆಳಗಾವಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಿತು. ಮೊದಲ ಬಾರಿಗೆ ಬೆಳಗಾವಿ ಮೇಯರ್ ಪಟ್ಟ ನೇಕಾರ ಸಮುದಾಯಕ್ಕೆ ಸಿಕ್ಕಿದೆ ಎಂದು ಸದಸ್ಯರು ಸಂತಸ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular