ಬೆಂಗಳೂರು: ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯಧನ ಯೋಜನೆ ಜಾರಿ ಮಾಡಲಾಗಿದೆ. ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.
ಶ್ರೀಮಾತಾ ವೈಷ್ಣೋದೇವಿ ದೇವಾಲಯಕ್ಕೆ ತೆರಳುವ ಯಾತ್ರಾರ್ತಿಗಳಿಗೆ ತಲಾ 5000 ರೂ. ಸಹಾಯಧನ ನೀಡುವ ಯೋಜನೆ ಜಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮಂಜೇಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ನೀಡುವ ಯೋಜನೆ ಜಾರಿ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 5 ಕೋಟಿ ರೂ. ಹಣ ಮೀಸಲಿಟ್ಟಿದೆ. 2026 -27ನೇ ಸಾಲಿನಿಂದ ಯೋಜನೆ ಅನುಷ್ಠಾನ ಮಾಡಲಾಗುವುದು. ಕೈಲಾಸ ಮಾನಸ ಸರೋವರ ಯಾತ್ರಿಗಳಿಗೆ 30 ಸಾವಿರ ರೂ. ಚಾರ್ ಧಾಮ್ ಯಾತ್ರೆಗೆ 20 ಸಾವಿರ, ಕಾಶಿ ಯಾತ್ರೆಗೆ 5,000 ರೂ. ಸಹಾಯಧನ ನೀಡಲಾಗುವುದು. ಅರ್ಚಕರಿಗೆ ಉಚಿತವಾಗಿ ಯಾತ್ರೆ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

