HomeKarnatakaBREAKING: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ

BREAKING: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯಾದ್ಯಂತ ರಣ ಬಿಸಿಲಿಗೆ ಭೂಮಿ ಕಾಡ ಕಾವಲಿಯಂತಾಗಿತ್ತು. ಕಳೆದ ಎರಡು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ವರುಣ ದೇವ ತಂಪೆರದಂತಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆಯಿಂದಲೇ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ.

ಸಿಲಿಕಾನ್ ಸಿಟಿಯಲ್ಲಿ ಆಲುಕಲ್ಲು ಮಳೆ ಕಂಡು ಬೆಂಗಳೂರಿಗರು ಅಚ್ಚರಿಗೊಂಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ. ಸಂಜೆಯಾಗುತ್ತಿದ್ದಂತೆ ಸುರುದ ಭಾರಿ ಮಳೆಯಿಂದ ಕಚೇರಿಯಿಣ್ದ ಮನೆಗೆ ಹೋಗುತ್ತಿರುಅವ್ವರು ಹಾಗೂ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಊರಿಗೆ ತೆರಳುತ್ತಿದ್ದವರು ಮಳೆ ಅಬ್ಬರದ ನಡುವೆ ಸಿಲುಕಿ ಪರದಾಡುವಂತಾಯಿತು.

ರಣ ಬಿಸಿಲಿಂದ ಹೈರಾಣಾಗಿದ್ದ ಬೆಂಗಳೂರಿಗರಿಗೆ ಆಲಿಕಲ್ಲು ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ಮೆಜೆಸ್ಟಿಕ್​, ಶಾಂತಿನಗರ, ಕಾಡುಗೋಡಿ, ಮಾರ್ಕೆಟ್, ಜಯನಗರ, ಬಸವೇಶ್ವರ ನಗರ, ಶಾಂತಿನಗರ, ವಿಲ್ಸನ್​ಗಾರ್ಡನ್, ರಿಚ್ಮಂಡ್​ಟೌನ್, ಆರ್.ಆರ್.ನಗರ, ಗಿರಿನಗರ, ವಿಜಯನಗರ, ಉತ್ತರಹಳ್ಲಿ, ಮೈಸೂರು ರಸ್ತೆ, ಬನಶಂಕರಿ, ಪದ್ಮನಭನಗರ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ. ರಸ್ತೆ ತುಂಬೆಲ್ಲ ನೀರು ಹರಿಯುತ್ತಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮರಾಜನಗರ, ದಾವಣಗೆರೆ, ದಕ್ಷಿಣ ಕನ್ನಡ ಜಿಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ಗುಮ್ಮನೂರ, ಗುಡಾಳ್, ಹೆಬ್ಬಾಳ್, ಆನಗೋಡ್ ಸೇರಿದಂತೆ ಬಹುತೇಕ ಕಡೆ ಮಳೆ ಆಗಿದೆ. ಗ್ರಾಮದ ರಸ್ತೆ ತುಂಬೆಲ್ಲಾ ರಾಶಿ ರಾಶಿ ಅಲಿಕಲ್ಲು ಬಿದ್ದಿದ್ದು, ಕಾಶ್ಮೀರದಂತೆ ಭಾಸವಾಗುತ್ತಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular