HomeKarnatakaಎಲ್ಲರೂ ಸಹಮತ ಸೂಚಿಸಿದರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ಬ್ಯಾನ್: ಸಚಿವ ತಂಗಡಗಿ

ಎಲ್ಲರೂ ಸಹಮತ ಸೂಚಿಸಿದರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ಬ್ಯಾನ್: ಸಚಿವ ತಂಗಡಗಿ

ಬೆಂಗಳೂರು: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಡಿಜೆ ನಿಷೇಧಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವಿಧಾನಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಶಿವಮೊಗ್ಗ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ, ಸಹ್ಯಾದ್ರಿ ಉತ್ಸವ ನಡೆಸಲು ಅನುದಾನ ಬಿಡುಗಡೆ ಮಾಡುವಂತೆ ಕೋರಿದ್ದಾರೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಕೊಪ್ಪಳದಲ್ಲಿ ಆನೆಗುಂದಿ ಉತ್ಸವ ಪುನಾರಂಬಿಸಬೇಕು ಎಂದು ಮನವಿ ಮಾಡಿದ್ದಾರೆ.

ಈ ವೇಳೆ ಡಿಜೆ ವಿಚಾರದ ಬಗ್ಗೆ ಚರ್ಚೆಯಾಗಿದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್, ಎಲ್ಲಾ ಉತ್ಸವ, ಮೆರವಣಿಗೆ, ಆಚರಣೆಗಳ ಸಂದರ್ಭದಲ್ಲಿ ಡಿಜೆ ದೊಡ್ಡ ಸಮಸ್ಯೆಯಾಗಿದೆ. ಮೆರವಣಿಗೆಯಲ್ಲಿ ಡಿಜೆ, ಐಟಂ ಸಾಂಗ್ ಗಳು ಇಲ್ಲವೆಂದರೆ ದೇವರುಗಳು ಮುಂದೆ ಸಾಗುವುದಿಲ್ಲ. ಇದು ನಾಚಿಕೆಗೇಡಿನ ಸಂಗತಿ. ಇದರಿಂದ ಸಂಸ್ಕೃತಿಗೆ ಯಾವ ಒಳಿತೂ ಆಗಿಲ್ಲ. ಇದರ ಬಗ್ಗೆ ಚರ್ಚೆ ನಡೆಯಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೆ ಪ್ರತಿಕ್ರಿಸಿದ ಸಚಿವ ಶಿವರಾಜ್ ತಂಗಡಗಿ, ಈ ಸಂಬಂಧ ಆದೇಶ ಹೊರಡಿಸಲಾಗುವುದು. ಡಿಜೆಯಿಂದ ಸಾಕಷ್ಟು ಸಮಸ್ಯೆ ಸೃಷ್ಟಿಯಾಗುತ್ತಿವೆ. ವಿರೋಧ ಪಕ್ಷಗಳ ನಾಯಕರು ಸೇರಿದಂತೆ ಎಲ್ಲರೂ ಸಹಮತ ಸೂಚಿಸಿದರೆ ಡಿಜೆ ನಿಷೇಧಿಸಲಾಗುವುದು ಎಂದು ತಿಳಿಸಿದ್ದಾರೆ.

ಶಾಸಕ ಚನ್ನಬಸಪ್ಪ, ಡಿಜೆ ನಮಗೆ ಬೇಕು. ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಮಸೀದಿಗಳಲ್ಲಿ ಆಜಾನ್ ಕೂಗುವುದನ್ನು ನಿಷೇಧಿಸಬೇಕು. ಅದನ್ನು ನೀವು ಮಾಡುವಿರಾ ಎಂದು ಪ್ರಶ್ನಿಸಿದ್ದಾರೆ. ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಡೆಸಿಬಲ್ ಪ್ರಮಾಣ ಎಷ್ಟು ಇರಬೇಕು ಎನ್ನುವುದನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿದ್ದು, ಸರ್ಕಾರಗಳು ಅದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಶಾಸಕ ಸುರೇಶ್ ಕುಮಾರ್, ಡಿಜೆ ಬ್ಯಾನ್ ಮಾಡುವ ಪ್ರಸ್ತಾಪಕ್ಕೆ ಬೆಂಬಲ ಸೂಚಿಸಿ, ಡಿಜೆ ಶಬ್ದದಿಂದ ಹೃದಯ ಸಂಬಂಧಿ ಸಮಸ್ಯೆ ಇರುವವರು ತೊಂದರೆ ಅನುಭವಿಸುವಂತಾಗಿದೆ. ಮಕ್ಕಳು ಕೂಡ ಕಿವಿ ಮುಚ್ಚಿಕೊಳ್ಳುತ್ತಾರೆ. ಪೊಲೀಸರು ಈ ವಿಚಾರದಲ್ಲಿ ಅಸಹಾಯಕರಾಗಿದ್ದು, ಡಿಜೆ ಶಬ್ದ ಮಾಲಿನ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular