ನವದೆಹಲಿ: ಪ್ಯಾನ್ ಕಾರ್ಡ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸೂಚನೆ ನೀಡಿದೆ. ಹೊಸ ಹಣಕಾಸು ವರ್ಷ ಏಪ್ರಿಲ್ 1ರಿಂದ ಆರಂಭವಾಗಲಿದ್ದು, ಇದಕ್ಕೂ ಮುನ್ನವೇ ಕೇಂದ್ರ ಸರ್ಕಾರ ಪ್ಯಾನ್ ಕಾರ್ಡ್ ಬಳಕೆದಾರರಿಗೆ ಮಹತ್ವದ ಸೂಚನೆ ನೀಡಿದೆ.
ಏಪ್ರಿಲ್ 1ರಿಂದ ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಗೆ ಬರಲಿವೆ. ಮಾರ್ಚ್ 31 ರೊಳಗೆ ಆಧಾರ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಮಾರ್ಚ್ 31ರೊಳಗೆ ಆಧಾರ್ ಗೆ ಪ್ಯಾನ್ ಜೋಡಣೆ ಮಾಡದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಲಿದೆ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಸಿದೆ.

