HomeLatest Newsಬೆತ್ತಲೆ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಅತಿಥಿ ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕನ ವಿರುದ್ಧದ ಅತ್ಯಾಚಾರ...

ಬೆತ್ತಲೆ ಫೋಟೋ ಬಹಿರಂಗಪಡಿಸುವುದಾಗಿ ಬೆದರಿಸಿ ಅತಿಥಿ ಶಿಕ್ಷಕಿ ಮೇಲೆ ಲೈಂಗಿಕ ದೌರ್ಜನ್ಯ: ಶಿಕ್ಷಕನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಅತಿಥಿ ಶಿಕ್ಷಕಿ ಮೇಲೆ ಸುಮಾರು ಒಂದು ವರ್ಷಕ್ಕೂ ಅಧಿಕ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸರ್ಕಾರಿ ಶಾಲಾ ಶಿಕ್ಷಕರ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದು ಮಾಡಲು ಹೈಕೋರ್ಟ್ ನಿರಾಕರಿಸಿದೆ.

 ಆರೋಪಿ ಲಿಂಗರಾಜ ನಾಯಕ್(47) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ನೀಡಲಾಗಿದೆ. ಪ್ರಕರಣದ ದಾಖಲೆ ಪರಿಶೀಲಿಸಿದಾಗ ಇದು ಸಮ್ಮತಿಯ ಲೈಂಗಿಕ ದೌರ್ಜನ್ಯವಲ್ಲ, ಬಲವಂತದಿಂದ ಒತ್ತಾಯಿಸಿ ಲೈಂಗಿಕ ದೌರ್ಜನ್ಯ ನಡೆದಿದೆ. ಈ ಹಂತದಲ್ಲಿ ಪ್ರಕರಣ ರದ್ದು ಮಾಡುವುದು ಸೂಕ್ತವಲ್ಲ, ಅರ್ಜಿದಾರರು ಪೂರ್ಣ ಪ್ರಮಾಣದ ವಿಚಾರಣೆ ಎದುರಿಸಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಆರೋಪಿ ಅರ್ಜಿಯನ್ನು ವಜಾಗೊಳಿಸಿದೆ.

ಅಧಿಕಾರ ದುರುಪಯೋಗ ಮಾಡಿಕೊಂಡು ಮೊದಲು ನಗ್ನ ಚಿತ್ರಗಳನ್ನು ಪಡೆದು ನಂತರ ಅವುಗಳನ್ನು ಜಾಲತಾಣದಲ್ಲಿ ಹಂಚಿಕೊಳ್ಳುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ. ಉದ್ಯೋಗ ಕಳೆದುಕೊಳ್ಳುವ ಭಯ ಮತ್ತು ಅವಮಾನ ಭೀತಿಯಲ್ಲಿದ್ದ ಸಂತ್ರಸ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದ ಸರ್ಕಾರಿ ಶಾಲೆಯೊಂದಕ್ಕೆ 2023ರಲ್ಲಿ ಅತಿಥಿ ಶಿಕ್ಷಕಿಯಾಗಿ ದೂರುದಾರೆ ಸೇರಿದ್ದರು. ಆಕೆಯನ್ನು ಪರಿಚಯಿಸಿಕೊಂಡ ಆರೋಪಿ ಕಚೇರಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಕೆಲಸದಿಂದ ತೆಗೆಯುವುದಾಗಿ ಬೆದರಿಸಿ ಮೊಬೈಲ್ ಮೂಲಕ ತನಗೆ ನಗ್ನ ಚಿತ್ರ ಕಳುಹಿಸಲು ಬಲವಂತ ಮಾಡಿದ್ದ. ಅವುಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಶಾಲೆ, ಮಹಿಳೆಯ ಮನೆ ಸೇರಿದಂತೆ ವಿವಿಧೆಡೆ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದ ಎಂದು ಆರೋಪಿಸಿ ಸಂತ್ರಸ್ತ ಶಿಕ್ಷಕಿ ದೂರು ನೀಡಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular