HomeKarnatakaಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ : ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ...

ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ : ಹಿಂದೂ ಸ್ನೇಹಿತೆಯರ ಜೊತೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಮೇಲೆ ಹಲ್ಲೆ.!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ   ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಯ ವೇಳೆ ಅನ್ಯಧರ್ಮದ ಯುವತಿಯೊಂದಿಗೆ ಮಾತನಾಡುತ್ತಿದ್ದ ಎನ್ನಲಾದ ಮುಸ್ಲಿಂ ಬಾಲಕನನ್ನು ಬಜರಂಗದಳದ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು, 17 ವರ್ಷದ ಬಾಲಕನ  ಮೇಲೆ ಹಲ್ಲೆ ನಡೆಸಲಾಗಿದೆ. ಅಷ್ಟೇ ಅಲ್ಲದೆ, ಆತನನ್ನು ಬಲವಂತವಾಗಿ ರಿಕ್ಷಾದಲ್ಲಿ ಕೂರಿಸಿಕೊಂಡು ಅಪಹರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯುವಕನನ್ನು ಸುತ್ತುವರಿದ ಗುಂಪು ಆತನನ್ನು ಎಳೆದಾಡಿ ಹಲ್ಲೆ ಮಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದ ಜಾತ್ರೆಯನ್ನು ನೋಡಲು 17 ವರ್ಷದ ಬಾಲಕ  ತನ್ನ ಹಿಂದೂ ಸ್ನೇಹಿತೆಯರ ಜೊತೆ ಬಂದಿದ್ದನು. ಜಾತ್ರೆ ವೀಕ್ಷಿಸುತ್ತಿರುವಾಗ ಅಲ್ಲಿಗೆ ಬಂದ ಬಜರಂಗದಳದ ಕಾರ್ಯಕರ್ತರು ಹಿಂದೂ ಹುಡುಗಿಯರನ್ನು ಲಾಡ್ಜ್ ಗೆ ಕರೆದೊಯ್ಯುತ್ತೀಯಾ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು, 17 ವರ್ಷದ ಬಾಲಕನ  ಮೇಲೆ ಹಲ್ಲೆ ನಡೆಸಲಾಗಿದೆ. ಅಷ್ಟೇ ಅಲ್ಲದೆ, ಆತನನ್ನು ಬಲವಂತವಾಗಿ ರಿಕ್ಷಾದಲ್ಲಿ ಕೂರಿಸಿಕೊಂಡು ಅಪಹರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಕ್ರಮ: ಸಂತ್ರಸ್ತ ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಕೆಲವು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರಕರಣದ ಗಂಭೀರತೆ: ಧಾರ್ಮಿಕ ಕೇಂದ್ರದ ಬಳಿ ಅಶಾಂತಿ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಮತ್ತು ಅಪಹರಣದಂತಹ ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular