HomeKarnatakaಸಮವಸ್ತ್ರದಲ್ಲೇ ಕಚೇರಿಯಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ: ರಾಮಚಂದ್ರರಾವ್ ವಿಡಿಯೋ ಅಸಲಿ ಎಂದು ದೃಢ

ಸಮವಸ್ತ್ರದಲ್ಲೇ ಕಚೇರಿಯಲ್ಲಿ ಮಹಿಳೆ ಜೊತೆ ಅನುಚಿತ ವರ್ತನೆ: ರಾಮಚಂದ್ರರಾವ್ ವಿಡಿಯೋ ಅಸಲಿ ಎಂದು ದೃಢ

ಬೆಂಗಳೂರು: ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆ ಜೊತೆ ಹಿರಿಯ ಪೊಲೀಸ್ ಅಧಿಕಾರಿ ಕೆ. ರಾಮಚಂದ್ರ ರಾವ್ ಅನುಚಿತವಾಗಿ ವರ್ತಿಸಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ತನಿಖಾಧಿಕಾರಿಗಳ ತಂಡ ವರದಿ ನೀಡಿದೆ.

ವಿಡಿಯೋಗಳು ಸಂಪೂರ್ಣ ನಿಜವಾಗಿದ್ದು, ಅವು ಎಐ ನಿರ್ಮಿತ ಅಥವಾ ಡೀಪ್ ಫೇಕ್, ಯಾವುದೇ ರೀತಿಯಲ್ಲಿ ಎಡಿಟ್ ಆಗಿರುವ ದೃಶ್ಯಗಳಲ್ಲ ಎನ್ನುವುದು ದೃಢಪಟ್ಟಿದೆ. ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್. ಹಿತೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ನಾಲ್ವರು ಐಪಿಎಸ್ ಅಧಿಕಾರಿಗಳ ತಂಡ 100 ಪುಟಗಳ ವರದಿ ನೀಡಿದೆ.

ವಿಡಿಯೋ ಎಡಿಟ್ ಆಗಿಲ್ಲ, ಅವು ನಿಜವಾಗಿವೆ. ಎಫ್ಎಸ್ಎಲ್ ದೃಢೀಕರಣದ ವಿಡಿಯೋಗಳಲ್ಲಿ ಯಾವುದೇ ಮಾರ್ಪಾಡು ಆಗಿಲ್ಲ. ರಾಮಚಂದ್ರರಾವ್ ಅವರ ಬೆಳಗಾವಿ ಅವಧಿಯಲ್ಲಿ ಕೆಲಸ ಮಾಡಿದ್ದ ಸಿಬ್ಬಂದಿ ಮಹಿಳೆಯರನ್ನು ಗುರುತಿಸಿದ್ದು ಅವರು ರಾಮಚಂದ್ರರಾವ್ ಅವರ ಖಾಸಗಿ ಕಚೇರಿಗೆ ಹಲವು ಬಾರಿ ಭೇಟಿ ನೀಡಿರುವುದು ದೃಢಪಟ್ಟಿದೆ. ಮಹಿಳೆಯರಲ್ಲಿ ಒಬ್ಬರು ತಮ್ಮ ಮೊಬೈಲ್ ನಲ್ಲಿ ಉದ್ದೇಶಪೂರ್ವಕವಾಗಿ ಇದನ್ನು ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬೆಳಕಿಗೆ ಬಂದ ನಂತರ ಮಹಿಳೆಯರು ಸಂಪರ್ಕಕ್ಕೆ ಸಿಗುತ್ತಿಲ್ಲ. ಮುಂದಿನ ತನಿಖೆಗೆ ಅವರ ಹೇಳಿಕೆ ಪ್ರಮುಖವಾಗಿದ್ದು, ತನಿಖಾ ತಂಡದ ಮುಂದೆ ಹಾಜರಾಗಬೇಕಿದೆ/ ಹಿರಿಯ ಅಧಿಕಾರಿಗಳ ತಂಡದ ವರದಿಯ ನಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ರಾಮಚಂದ್ರ ರಾವ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

 ವಿಡಿಯೋಗಳು ಬಹಿರಂಗವಾದ ಸಂದರ್ಭದಲ್ಲಿ ರಾಮಚಂದ್ರ ರಾವ್ ಅವುಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದರು. ಎಐ ಮೂಲಕ ಸೃಷ್ಟಿಸಿದ ಮಾರ್ಫ್ ವಿಡಿಯೋ ಅವಾಗಿದ್ದು, ತಮ್ಮ ವಿರುದ್ಧ ಸಂಚು ರೂಪಿಸಲಾಗಿದೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು. ಆದರೆ ಆ ವಿಡಿಯೋ ಅಸಲಿ ಎನ್ನುವುದು ಗೊತ್ತಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular