ಬೆಂಗಳೂರು: ಚಲಿಸುತ್ತಿದ್ದ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಬೆಂಗಳೂರಿನ ಕನಕಪುರ ರಸ್ತೆಯ ಕೋಣನಕುಂಟೆ ಕ್ರಾಸ್ ನಲ್ಲಿ ನಡೆದಿದೆ.
ವರ್ನಾ ಕಾರ್ ಚಲಿಸುತ್ತಿದ್ದ ವೇಳೆಯಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದಿದೆ. ಈ ವೇಳೆ ಎಚ್ಚೆತ್ತ ಚಾಲಕ ರಸ್ತೆ ಬದಿ ಕಾರ್ ನಿಲ್ಲಿಸಿ ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

