HomeKarnatakaದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ: ಮುಸ್ಲಿಮರಿಗೆ ಟಿಕೆಟ್ ಗೆ ಪಟ್ಟು: ಟಿಕೆಟ್...

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಟಿಕೆಟ್ ಗೆ ಭಾರಿ ಪೈಪೋಟಿ: ಮುಸ್ಲಿಮರಿಗೆ ಟಿಕೆಟ್ ಗೆ ಪಟ್ಟು: ಟಿಕೆಟ್ ಕೈತಪ್ಪಿದ್ರೆ ಕಾಂಗ್ರೆಸ್ ಸೋಲಿಸುವ ಬಗ್ಗೆ ಚರ್ಚೆ

ಬೆಂಗಳೂರು: ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಗೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಎಂ. ಸಮರ್ಥ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಪಸಂಖ್ಯಾತರಿಂದ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಸಮರ್ಥ್ ಜೊತೆಗೆ ಸೈಫುಲ್ಲಾ ಹೆಸರು ಕೂಡ ಕಾಂಗ್ರೆಸ್ ಹೈಕಮಾಂಡ್ ಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್  ಸಿಂಗ್ ಸುರ್ಜೇವಾಲಾ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಎಂ. ಸಮರ್ಥ್ ಮತ್ತು ಖಾಲಿದ್ ಸೈಫುಲ್ಲಾ ಅವರ ಹೆಸರನ್ನು ಅಂತಿಮಗೊಳಿಸಿ ವರಿಷ್ಠರಿಗೆ ಕಳುಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗಾಗಿ ಪೈಪೋಟಿಗೆ ನಡೆದಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿಯಲಾಗಿದೆ. ಯಾವುದೇ ಕಾರಣಕ್ಕೂ ಟಿಕೆಟ್ ಬಿಟ್ಟು ಕೊಡುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ತಡರಾತ್ರಿ ನಡೆದ ಮುಸ್ಲಿಂ ಮುಖಂಡರ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.

ಹಳೆ ದಾವಣಗೆರೆಯ ಅಖ್ತರ್ ರಜಾ ವೃತ್ತದಲ್ಲಿ ಸಭೆ ನಡೆಸಲಾಗಿದೆ. ತಡರಾತ್ರಿ ಮುಸ್ಲಿಂ ಮುಖಂಡರು ಮತ್ತು ಯುವಕರು ಸಭೆ ನಡೆಸಿದ್ದಾರೆ. ಈ ಹಬ್ಬ ಮುಗಿದ ತಕ್ಷಣ ನೂರಾರು ಜನ ನಾಮಪತ್ರ ಹಾಕಿ. ಅದು ಏನು ಆಗುತ್ತೋ ಆಗಲಿ ನೋಡೋಣ ಎಂದು ಮುಖಂಡ ಮನ್ಸೂರ್ ಅಲಿ ಹೇಳಿದ್ದಾರೆ.

ನಾಮಿನೇಷನ್ ಮಾಡಿದವರ ಪೈಕಿ ಒಬ್ಬರಿಗೆ ಟಿಕೆಟ್ ಕೇಳೋಣ. ಟಿಕೆಟ್ ಸಿಗದಿದ್ದರೆ ಒಂದು ಕಡೆ ಕುಳಿತು ತೀರ್ಮಾನ ಮಾಡೋಣ. ನಾಮಪತ್ರ ಸಲ್ಲಿಕೆಗೆ ಏನು ದಾಖಲೆ ಬೇಕು ಕೇಳಿ ಮಾಹಿತಿ ನೀಡುತ್ತೇನೆ. ಆದರೆ ದಾವಣಗೆರೆ ದಕ್ಷಿಣ ಟಿಕೆಟ್ ಮಾತ್ರ ಬಿಟ್ಟುಕೊಡುವುದು ಬೇಡ, ಟಿಕೆಟ್ ತಪ್ಪಿದ್ದರೆ ಕಾಂಗ್ರೆಸ್ ಸೋಲಿಸೋಣ ಎಂದು ತಡರಾತ್ರಿ ನಡೆದ ಸಭೆಯಲ್ಲಿ ಚರ್ಚೆಯಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular